ಉಡುಪಿ: “ಸ್ವದೇಶಿ ಉತ್ಪನ್ನಗಳನ್ನು ಬೆಂಬಲಿಸಿ – ಸ್ಥಳೀಯ ಉದ್ಯಮಿಗಳನ್ನು ಪ್ರೋತ್ಸಾಹಿಸಿ” ಎಂಬ ಧ್ಯೇಯದೊಂದಿಗೆ ಜು.31 ರಿಂದ ಆ.2 ವರೆಗೆ “ಸ್ವದೇಶಿ ಖಾದ್ಯ ಮೇಳ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ
ನಡೆಯಲಿದೆ.
ಸಮಾಜ ಸೇವಕ, ಕಾಂಗ್ರೆಸ್ ಮುಖಂಡ, ಅನೇಕ ದೈವ-ದೇವಸ್ಥಾನಗಳ ಜೀರ್ಣೋದ್ಧಾರದ ರೂವಾರಿಗಳೂ, ಕನ್ನರ್ಪಾಡಿ ಜಯದುರ್ಗ ಪರಮೇಶ್ವರಿ ದೇವಸ್ಥಾನದ ನಿಕಟಪೂರ್ವ ಅಧ್ಯಕ್ಷರಾದ ಕೆ.ಕೃಷ್ಣಮೂರ್ತಿ ಆಚಾರ್ಯ ಅವರ ಸಾರಥ್ಯದಲ್ಲಿ ಅದ್ದೂರಿ ಕಾರ್ಯಕ್ರಮ ನಡೆಯಲಿದೆ.
ಮೇಳದಲ್ಲಿ ಏನೇನಿರುತ್ತೆ…
ಪ್ರತೀ ದಿನ ಬೆಳಿಗ್ಗೆ 10ರಿಂದ ರಾತ್ರಿ 10 ಗಂಟೆಯವರೆಗೆ ನಡೆಯಲಿರುವ ಈ ಖಾದ್ಯ ಮೇಳದಲ್ಲಿ ಸ್ವದೇಶಿ ತಿಂಡಿ-ತಿನಿಸುಗಳು, ತುಳುನಾಡಿನ ವಿಶೇಷ ತಿನಿಸುಗಳು,
ವಿವಿಧ ನಮೂನೆಯ ದೋಸೆ, ಹತ್ತಾರು ಹಲಸಿನ ಹಣ್ಣಿನಿಂದ ತಯಾರಿಸುವ ಖಾದ್ಯಗಳು, ಮಳೆಗಾಲದ ವಿಶೇಷ ತಿನಿಸಿಗಳು, ಸ್ಥಳದಲ್ಲೇ ತಯಾರಿಸಿ ಕೊಡುವ ಹತ್ತಾರು ಲೈವ್ ಫುಡ್ ಗಳು,
ಹಲವು ಸಾವಯವ ವಸ್ತುಗಳು, ಹಾಗೂ ಕರಕುಶಲ ವಸ್ತುಗಳು, ಫ್ಯಾನ್ಸಿ ವಸ್ತುಗಳು, ಗೃಹೋಪಯೋಗಿ ಸಾಮಗ್ರಿಗಳು, ಹಾಗೂ ಇತರೆ ಸ್ವದೇಶಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ
ಕಾರ್ಯಕ್ರಮದ ಉದ್ದೇಶವೇನು?
ಮೂರು ದಿನಗಳ ಕಾಲ ನಡೆಯಲಿರುವ ಈ ಮೇಳದಲ್ಲಿ ಸಾವಿರಾರು ಮಂದಿ ಭಾಗವಹಿಸುವ ನಿರೀಕ್ಷೆಯಿದ್ದು, ಸ್ಥಳೀಯ ಉದ್ಯಮಿಗಳು ಮತ್ತು ಸಣ್ಣ ವ್ಯಾಪಾರಿಗಳಿಗೆ ತಮ್ಮ ಉತ್ಪನ್ನಗಳನ್ನು ಪರಿಚಯಿಸಿ ವ್ಯಾಪಾರ ವಿಸ್ತರಿಸಿಕೊಳ್ಳಲು ಉತ್ತಮ ವೇದಿಕೆ ಇದಾಗಿದೆ. ಆ ಮೂಲಕ ಸ್ಥಳೀಯ ರೈತರಿಗೆ ಪ್ರೋತ್ಸಾಹ, ಸಾವಯವ ವಸ್ತುಗಳ ಸದ್ಬಳಕೆ ಹೆಚ್ಚಿಸಲು, ಮತ್ತು ಆರೋಗ್ಯಕರ ಸ್ವದೇಶಿ ಆಹಾರ ವಸ್ತುಗಳು ಹಾಗೆಯೇ ಸಾವಯವ ವಸ್ತುಗಳಿಗೆ ಹೆಚ್ಚಿನ ಆದ್ಯತೆ ನೀಡಿ ಪ್ರಚುರ ಪಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.















