ನವದೆಹಲಿ: ಇಷ್ಟು ದಿನ ಅಬಕಾರಿ ಸುಂಕವನ್ನು ಹೆಚ್ಚಿಸಿ ಮದ್ಯಪ್ರಿಯರಿಗೆ ಶಾಕ್ ನೀಡುತ್ತಿದ್ದ ಕೇಂದ್ರ ಸರ್ಕಾರವು, ಇದೀಗ ಸಿಹಿ ಸುದ್ದಿಯೊಂದನ್ನು ನೀಡಲು ಮುಂದಾಗಿದೆ. ಯುಕೆಯಿಂದ ಸ್ಕ್ವಾಚ್ ವಿಸ್ಕಿಯನ್ನು ದೊಡ್ಡ ಪ್ರಮಾಣದಲ್ಲಿ ಭಾರತಕ್ಕೆ ಆಮದು ಮಾಡಿಕೊಳ್ಳಲು ಚಿಂತನೆ ನಡೆಸಿದೆ.
ಮಂಗಳವಾರ ನಡೆದ ಸಿಐಐನ ಭಾರತ-ಯುಕೆ ವಾರ್ಷಿಕ ಸಮ್ಮೇಳನದ ಉದ್ಘಾಟನಾ ಅಧಿವೇಶನದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಈ ಬಗ್ಗೆ ಮಾಹಿತಿ ನೀಡಿದರು.
‘ನಾನು ಸ್ಕ್ವಾಚ್ ವಿಸ್ಕಿಯನ್ನು ಕುಡಿಯುವುದಿಲ್ಲ. ಆದರೆ ಸ್ಕ್ವಾಚ್ ವಿಸ್ಕಿಯ ಹೆಸರಿನಲ್ಲಿ ಭಾರತದಲ್ಲಿ ಮಾರಾಟ ಆಗುತ್ತಿರುವ ನಕಲಿ ಮದ್ಯದ ಹಾವಳಿಯನ್ನು ಕೊನೆಗೊಳಿಸಬೇಕಾಗಿದೆ. ಅದಕ್ಕಾಗಿ ಯುಕೆನಿಂದ ಸ್ಕ್ವಾಚ್ ವಿಸ್ಕಿಯನ್ನು ದೊಡ್ಡ ಪ್ರಮಾಣದಲ್ಲಿ ಆಮದು ಮಾಡಿಕೊಳ್ಳಲು ಭಾರತ ಮುಕ್ತವಾಗಿದೆ ಎಂದು ಅವರು ಹೇಳಿದರು.