ರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ವಕೀಲರ ಸಂಘದಿಂದ ಸಾಂಕೇತಿಕ ಪ್ರತಿಭಟನೆ

ಉಡುಪಿ: ವಕೀಲರ ರಕ್ಷಣಾ ಕಾಯ್ದೆಯನ್ನು ಸರಕಾರ ಶೀಘ್ರವೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಶುಕ್ರವಾರದಂದು ವಕೀಲರ ಸಂಘದಿಂದ ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಮುಂಭಾಗದಲ್ಲಿ ವಕೀಲರೆಲ್ಲ ಜಮಾಯಿಸಿ ಕಾಯ್ದೆಯನ್ನು ಆದಷ್ಟು ಬೇಗ ಜಾರಿಗೆ ತರುವಂತೆ ಸರಕಾರವನ್ನು ಒತ್ತಾಯಿಸಿದರು. ಸಮಾಜದ ರಕ್ಷಣೆಯಲ್ಲಿ ತೊಡಗಿರುವ ವಕೀಲರಿಗೆ ರಕ್ಷಣೆ ಇಲ್ಲ, ಇತ್ತೀಚೆಗೆ ವಕೀಲರ ಮೇಲೆ ಹಲ್ಲೆ ನಡೆಸುವ ಘಟನೆಗಳು ಹೆಚ್ಚುತ್ತಿವೆ. ವಕೀಲರಿಗೂ ರಕ್ಷಣೆ ಅವಶ್ಯ. ಹಿರಿ-ಕಿರಿ ಎಲ್ಲ ವಕೀಲರಿಗೂ ರಕ್ಷಣೆಯ ಅಗತ್ಯವಿದ್ದು, ಸರಕಾರ ಮುಂಬರುವ ಅಧಿವೇಶನದಲ್ಲೇ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ವಕೀಲರಿಗೆ ರಕ್ಷಣೆ ಒದಗಿಸಬೇಕು ಎಂದು ವಕೀಲರ ಸಂಘದ ಅಧ್ಯಕ್ಷ ಬಿ. ನಾಗರಾಜ್ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಹಿರಿ-ಕಿರಿಯ ವಕೀಲರು, ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.