ಡಿ. 3 ಮತ್ತು 4 ರಂದು ಸುವರ್ಣ ಉಡುಪಿಗೆ ರಜತ ಉಡುಪಿಯ ಪರಿಕಲ್ಪನೆ ಕುರಿತು ವಿಚಾರ ಸಂಕಿರಣ

ಉಡುಪಿ: ಉಡುಪಿ ಜಿಲ್ಲಾ ರಜತ ಮಹೋತ್ಸವದ ಅಂಗವಾಗಿ ಶೈಕ್ಷಣಿಕ, ಸಾಂಸ್ಕೃತಿಕ, ಆರ್ಥಿಕ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ತೋರ್ಪಡಿಸಿರುವ ಜಿಲ್ಲೆಯು ರಚನೆಗೊಂಡು 25 ವರ್ಷಗಳ ಸಾರ್ಥಕತೆಯ ಸಾಧನೆಯನ್ನು ನೆನಪಿಸಿಕೊಂಡು ಮುಂದಿನ 25 ವರ್ಷಗಳಲ್ಲಿ ಸಾಧಿಸಬೇಕಾಗಿರುವ ಹೊಸ ಯೋಜನೆಗಳ ರೂಪುರೇಷೆಯನ್ನು ಕೈಗೊಂಡು ಕಾರ್ಯಗತಗೊಳಿಸಲು ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಅಭಿಪ್ರಾಯದಂತೆ ಡಿಸೆಂಬರ್ 3 ಮತ್ತು 4 ರಂದು ಉಡುಪಿ ಜಿಲ್ಲೆಯಲ್ಲಿ ದಿಕ್ಸೂಚಿಯಾಗಿ ಸುವರ್ಣ ಉಡುಪಿಗೆ ರಜತ ಉಡುಪಿಯ ಪರಿಕಲ್ಪನೆ ಎಂಬ ಎರಡು ದಿನಗಳ ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿದೆ.

ಈ ಹಿನ್ನೆಲೆ ಜಿಲ್ಲೆಯಲ್ಲಿ ಕಳೆದ 25 ವರ್ಷಗಳಿಂದ ಸೇವೆ ಸಲ್ಲಿಸಿದ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಶಿಕ್ಷಣ ತಜ್ಞರು, ಕೈಗಾರಿಕೋದ್ಯಮಿಗಳು, ವೈದ್ಯಕೀಯ ರಂಗದಲ್ಲಿ ಸೇವೆ ಸಲ್ಲಿಸಿದವರು, ಕೃಷಿ, ಮತ್ಸ್ಯೋದ್ಯಮ ಮತ್ತು ಪ್ರವಾಸೋದ್ಯಮಿಗಳ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದ್ದು, ವಿಚಾರ ಸಂಕಿರಣವು ಆರೋಗ್ಯ ಮತ್ತು ಶಿಕ್ಷಣ, ಪ್ರವಾಸೋದ್ಯಮ, ಸ್ವಾಸ್ಥ್ಯ ಮತ್ತು ಪರಿಸರ, ಉದ್ಯಮ, ಬಂಡವಾಳ ಮತ್ತು ಮೂಲಸೌಕರ್ಯ, ಬ್ಯಾಂಕಿಂಗ್ ಮತ್ತು ಸ್ಟಾರ್ಟ್ ಅಪ್ ಮತ್ತು ಕೃಷಿ ಹಾಗೂ ಕೃಷಿ ಸಂಬಂಧಿತ ವಿಷಯಗಳನ್ನು ಒಳಗೊಂಡಿರುತ್ತದೆ.

ವಿಚಾರ ಸಂಕಿರಣದಲ್ಲಿ ಭಾಗವಹಿಸಲು ಆಸಕ್ತರು ವೆಬ್‌ಸೈಟ್ https://forms.gle/Tv2pzeSELsBddYCy5 ಅಥವಾ ಕ್ಯೂ.ಆರ್ ಕೋಡ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.