ಧರ್ಮಸ್ಥಳ: ವೃದ್ಧೆಗೆ ಲಡ್ಡು–ಜ್ಯೂಸ್ ನೀಡಿ ವಂಚನೆ; ಚಿನ್ನಾಭರಣದೊಂದಿಗೆ ಪರಾರಿ

ಬೆಳ್ತಂಗಡಿ: ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ವೃದ್ದೆಯೊಬ್ಬರಿಗೆ ಲಡ್ಡು ಪ್ರಸಾದ ಮತ್ತು ಜ್ಯೂಸ್ ನೀಡಿ ಅಸ್ವಸ್ಥಳನ್ನಾಗಿಸಿ ಸುಮಾರು ₹10 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆ Dharmasthala Police Station ನಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು ಜೆ.ಪಿ.ನಗರ ನಿವಾಸಿ ಪ್ರೇಮಾ ಕೆ. (70) ಅವರು ಮೇ 23ರಂದು ಬೆಂಗಳೂರಿನಿಂದ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿರುವ ಸಂಬಂಧಿಕರ ಮನೆಗೆ ಪೂಜಾ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಬಳಿಕ ಮೇ 25ರಂದು ಶ್ರೀ ಕ್ಷೇತ್ರ […]