‘ಟಾಕ್ಸಿಕ್’ ಸಿನಿಮಾ ತಡವಾಗಲು ಬಲವಾದ ಕಾರಣಗಳಿವೆ- ನಟಿ ತಾರಾ ಸುತಾರಿಯಾ

ರಾಕಿಂಗ್ ಸ್ಟಾರ್ ಯಶ್ Yash ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಟಾಕ್ಸಿಕ್ Toxic ಬಿಡುಗಡೆಯ ಮುಂದೂಡಲ್ಪಡುತ್ತಿರುವುದು ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿರುವ ನಡುವೆಯೇ, ನಟಿ ತಾರಾ ಸುತಾರಿಯಾ Tara Sutaria ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಚಿತ್ರದ ಬಿಡುಗಡೆ ವಿಳಂಬವಾಗುತ್ತಿರುವುದಕ್ಕೆ ಹಲವು ತಾರ್ಕಿಕ ಮತ್ತು ಬಲವಾದ ಕಾರಣಗಳಿವೆ ಎಂದು ಅವರು ಹೇಳಿದ್ದಾರೆ. ಆರಂಭದಲ್ಲಿ ‘ಟಾಕ್ಸಿಕ್’ ಚಿತ್ರವನ್ನು ಮಾರ್ಚ್ 19ರಂದು ಬಿಡುಗಡೆ ಮಾಡಲು ಯೋಜಿಸಲಾಗಿತ್ತು. ನಂತರ ಮಧ್ಯಪ್ರಾಚ್ಯದಲ್ಲಿ ನಡೆದ ಇರಾನ್-ಇಸ್ರೇಲ್ ಸಂಘರ್ಷದ ಹಿನ್ನೆಲೆ ಬಿಡುಗಡೆಯನ್ನು ಜೂನ್ 4ಕ್ಕೆ ಮುಂದೂಡಲಾಯಿತು. […]