ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಇವರಿಗೆ “ಜಿಲ್ಲಾ ಚುನಾವಣಾಧಿಕಾರಿ” ಪ್ರಶಸ್ತಿಯ ಗರಿ
ಉಡುಪಿ: ಭಾರತ ಚುನಾವಣಾ ಆಯೋಗವು 13ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು “ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ” ಎಂಬ ಧ್ಯೇಯವಾಕ್ಯದೊಂದಿಗೆ ಆಚರಿಸುವಂತೆ ನಿರ್ದೇಶನ ನೀಡಿರುವ ಹಿನ್ನಲೆಯಲ್ಲಿ ರಾಜ್ಯ ಮಟ್ಟದಲ್ಲಿ ಜ.25 ರಂದು ಬೆಂಗಳೂರು ಇಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಗಿತ್ತು. ಈ ಸಂದರ್ಭದಲ್ಲಿ ರಾಜ್ಯ ಮಟ್ಟದಲ್ಲಿ ವಿವಿಧ ವಿಭಾಗಗಲ್ಲಿ ಅಧಿಕಾರಿ ಸಿಬ್ಬಂದಿಗಳನ್ನು ಆಯ್ಕೆ ಮಾಡಲಾಗಿದ್ದು, ಅದರಂತೆ “ಜಿಲ್ಲಾ ಚುನಾವಣಾಧಿಕಾರಿ” ವಿಭಾಗದಲ್ಲಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಆಯ್ಕೆಯಾಗಿದ್ದು, ಬುಧವಾರದಂದು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ […]