ಬ್ರಹ್ಮಾವರದಲ್ಲಿ ಕೃಷಿ ಕಾಲೇಜು ಸ್ಥಾಪನೆಗೆ ಸರ್ಕಾರದಿಂದ ಅಗತ್ಯ ಸಹಕಾರ ನೀಡಿಕೆ: ರಘುಪತಿ ಭಟ್
ಬ್ರಹ್ಮಾವರ: ಜಿಲ್ಲೆಯಲ್ಲಿ ಕೃಷಿ ಕಾಲೇಜು ಆರಂಭಿಸುವ ಬಗ್ಗೆ ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿ.ವಿ ಮೂಲಕ ಅಗತ್ಯ ಕ್ರಮ ಕೈಗೊಳ್ಳಬೇಕಿದ್ದು, ಕರಾವಳಿ ಪ್ರದೇಶದಲ್ಲಿ ಕೃಷಿ ಕಾಲೇಜು ಅತ್ಯಂತ ಅಗತ್ಯವಾಗಿದೆ. ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಈಗಾಗಲೇ ಹೆಚ್ಚಿನ ಪ್ರಮಾಣದ ಅಗತ್ಯ ಮೂಲಭೂತ ಸೌಲಭ್ಯಗಳು, ವಿಜ್ಞಾನಿಗಳು, ಸಿಬ್ಬಂದಿಗಳು ಲಭ್ಯವಿದ್ದು ಶೀಘ್ರದಲ್ಲಿ ಕೃಷಿ ಕಾಲೇಜು ಆರಂಭಕ್ಕೆ ಸರ್ಕಾರದಿಂದ ಅಗತ್ಯವಿರುವ ಎಲ್ಲಾ ಅಗತ್ಯ ಸಹಕಾರ ನೀಡಲಾಗುವುದು ಎಂದರು. ಅವರು ಶನಿವಾರ ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ […]