ಹೆಬ್ರಿ ತಾಲೂಕು ಪಂಚಾಯತ್ ಕಟ್ಟಡಕ್ಕೆ 1.47 ಕೋಟಿ, ಕಾರ್ಕಳ ತಾಲೂಕು ಪಂಚಾಯತ್ ಕಟ್ಟಡಕ್ಕೆ ಹೆಚ್ಚುವರಿ 20 ಲಕ್ಷ ಅನುದಾನ ಬಿಡುಗಡೆ

ಕಾರ್ಕಳ: ಕಾರ್ಕಳ ತಾಲೂಕಿನಿಂದ ಬೇರ್ಪಟ್ಟು ಹೊಸದಾಗಿ ರಚನೆಗೊಂಡ ಹೆಬ್ರಿ ತಾಲೂಕಿಗೆ ಪೂರ್ಣ ಪ್ರಮಾಣದ ಮೂಲಭೂತ ಅವಶ್ಯಕತೆಗಳನ್ನು ಒದಗಿಸುವ ನಿಟ್ಟಿನಲ್ಲಿ ಹಂತ ಹಂತವಾಗಿ ಕಾರ್ಯಗತಗೊಳಿಸಿದೆ. ನೂತನ ಹೆಬ್ರಿ ತಾಲೂಕು ಪಂಚಾಯತ್ ಕಟ್ಟಡ ನಿರ್ಮಾಣಕ್ಕೆ ರೂ. 1.47 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಹೆಬ್ರಿ ತಾಲೂಕು ಪಂಚಾಯತ್ ಈಗ ಹೆಬ್ರಿ ಗ್ರಾಮ ಪಂಚಾಯತ್ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಸ್ವಂತ ಕಟ್ಟಡ ಅತೀ ಶೀಘ್ರ ಮಾಡುವ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ವಿ. ಸುನಿಲ್ ಕುಮಾರ್ ರವರ ವಿಶೇಷ ಪ್ರಯತ್ನದಿಂದಾಗಿ ಇದೀಗ ಅನುದಾನ […]