ಚಿತ್ರಮಂದಿರ, ಜಿಮ್, ಈಜುಕೊಳಗಳಲ್ಲಿ ಶೇ.100ರಷ್ಟು ಆಸನ ಭರ್ತಿಗೆ ಅವಕಾಶ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.

ಉಡುಪಿ, ಫೆ.7: ಕೋವಿಡ್-19 ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಹೊರಡಿಸಲಾದ ಹೆಚ್ಚುವರಿ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಅನುಷ್ಠಾನದಿಂದ ಜಿಲ್ಲೆಯಾದ್ಯಂತ ಪಾಸಿಟಿವ್ ಪ್ರಕರಣಗಳ ಪ್ರಮಾಣದಲ್ಲಿ ಇಳಿಕೆಯಾಗಿರುವುದರಿಂದ, ಹೊರಡಿಸಲಾದ ಆದೇಶದಲ್ಲಿ ಮಾರ್ಪಾಡು ಮಾಡಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ. ಸಿನಿಮಾ ಹಾಲ್, ಮಲ್ಟಿಫ್ಲೆಕ್ಸ್, ಥಿಯೇಟರ್, ರಂಗಮಂದಿರ, ಆಡಿಟೋರಿಯಂ, ಜಿಮ್ ಮತ್ತು ಯೋಗ ಕೇಂದ್ರ ಹಾಗೂ ಈಜುಕೊಳಗಳಲ್ಲಿ ಒಟ್ಟು ಆಸನ ಸಾಮರ್ಥ್ಯದ ಶೇ. 100 ಸಾಮರ್ಥ್ಯದೊಂದಿಗೆ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಿಕೊಂಡು ಕಾರ್ಯಾಚರಿಸಲು ಅನುಮತಿ ನೀಡಲಾಗಿದ್ದು, ನಿಗಧಿತ ಆಸನ […]