ಉಡುಪಿ ಜಿಲ್ಲೆಯಲ್ಲಿ 34 ಸಾವಿರ ಹೆಕ್ಟೇರ್ ಪ್ರದೇಶವನ್ನು ಡೀಮ್ಡ್ ಫಾರೆಸ್ಟ್ ನಿಂದ ಕೈಬಿಡಲಾಗಿದೆ: ಸಚಿವ ಕೋಟ

ಕಾರ್ಕಳ: ಡೀಮ್ಡ್ ಫಾರೆಸ್ಟ್ ಸಮಸ್ಯೆಯಿಂದ ಬಹಳಷ್ಟು ಮಂದಿಗೆ ಭೂಮಿಯ ಹಕ್ಕುಪತ್ರಗಳನ್ನು ಹಾಗೂ ಹಕ್ಕುಗಳನ್ನು ನೀಡಲು ಸಾಧ್ಯವಾಗಿಲ್ಲ. ರಾಜ್ಯದಲ್ಲಿ 9 ಹೆಕ್ಟೇರ್ ಡೀಮ್ಡ್ ಫಾರೆಸ್ಟ್ ಇದೆ ಎಂದು ಗುರುತಿಸಲಾಗಿದ್ದು, ಇದೀಗ ನಡೆಸಿರುವ ಪುನರ್ ಪರಿಶೀಲನೆಯಿಂದ 6 ಲಕ್ಷ ಹೆಕ್ಟೇರ್ ಪ್ರದೇಶವನ್ನು ಆ ವ್ಯಾಪ್ತಿಯಿಂದ ಕೈಬಿಡಲು ನಿರ್ಧರಿಸಲಾಗಿದೆ ಎಂದು ಹಿಂದು ಧಾರ್ಮಿಕ ದತ್ತಿ ಇಲಾಖೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಕಾರ್ಕಳ ಪ್ರವಾಸಿ ಬಂಗಲೆಯಲ್ಲಿ ಮಂಗಳವಾರ ಕಾರ್ಕಳ ತಾಲೂಕು ಕಾರ್ಯ ನಿರತ ಪತ್ರಕರ್ತರ […]