ಕೋಟಿ ಕಂಠ ಗಾಯನದಲ್ಲಿ ಉಡುಪಿ ಜಿಲ್ಲೆಯಿಂದ 5 ಲಕ್ಷ ಮಂದಿ ಭಾಗಿ: ಸಚಿವ ಸುನೀಲ್ ಕುಮಾರ್

ಉಡುಪಿ: ಅಕ್ಟೋಬರ್ 28 ರಂದು ರಾಜ್ಯ ಸೇರಿದಂತೆ ವಿಶ್ವದ ಇತರೆ ಭಾಗದಲ್ಲಿರುವ 1 ಕೋಟಿಗೂ ಅಧಿಕ ಕನ್ನಡಿಗರಿಂದ ಕನ್ನಡದ ಹಿರಿಮೆ ಸಾರುವ ಕನ್ನಡ ಗೀತೆಗಳ ಗಾಯನ ಕಾರ್ಯಕ್ರಮ ನಡೆಸಲು ಎಲ್ಲಾ ಅಗತ್ಯ ಸಿದ್ದತೆ ನಡೆಸಲಾಗುತ್ತಿದ್ದು, ಉಡುಪಿ ಜಿಲ್ಲೆಯಿಂದ 5 ಲಕ್ಷ ಜನ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದರೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಹೆಳಿದರು. ಅವರು ಇಂದು ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲೆಯಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ […]