ಜೂ.3 ಮತ್ತು 4ರಂದು ಮಂಗಳೂರಿನಲ್ಲಿ 6ನೇ ವರ್ಷದ ಹಲಸು ಹಬ್ಬ

ಮಂಗಳೂರು: ಮಂಗಳೂರಿನ ಸಾವಯವ ಕೃಷಿಕ ಗ್ರಾಹಕ ಬಳಗದ ವತಿಯಿಂದ 6ನೇ ವರ್ಷದ ಹಲಸು ಹಬ್ಬ ಜೂನ್ 3 ಮತ್ತು ‌4ರಂದು ಶರವು ದೇವಳ ಬಳಿಯ‌ ಬಾಳಂಭಟ್ ಹಾಲ್‌ನಲ್ಲಿ ನಡೆಯಲಿದೆ. ಜೂನ್ 3ರಂದು ಬೆಳಗ್ಗೆ 9.30ಕ್ಕೆ ಮೇಯರ್ ಜಯಾನಂದ ಅಂಚನ್ ಸಭಾ ಕಾರ್ಯಕ್ರಮ ಉದ್ಘಾಟಿಸುವರು. ಭಟ್ ಆಯಂಡ್ ಭಟ್ ಯೂ ಟ್ಯೂಬ್ ಚಾನಲ್‌ನ ಸುದರ್ಶನ್ ಭಟ್ ಬೆದ್ರಾಡಿ ಹಲಸು ಹಣ್ಣು ತುಂಡು‌ ಮಾಡಿ ಹಬ್ಬಕ್ಕೆ ಚಾಲನೆ‌ ನೀಡುವರು. ಹೋಳಿಗೆ‌ ಮಾಡಿ‌ ಹಲಸು ಮೌಲ್ಯ ವರ್ಧನೆ‌ ಮಾಡಿದ‌ ಲಕ್ಷ್ಮೀ ಚಿದಾನಂದರನ್ನು […]