ಪ್ರಭಾಸ್ ನಟನೆಯ ‘ಆದಿಪುರುಷ್’ ಚಿತ್ರವನ್ನು ಕನ್ನಡ ಭಾಷೆಯಲ್ಲಿ ರಿಲೀಸ್ ಮಾಡುವ ಜವಾಬ್ದಾರಿ ಹೊತ್ತ ಕನ್ನಡದ ಕೆ.ಆರ್.ಜಿ ಸಂಸ್ಥೆ

ಸ್ಯಾಂಡಲ್ವುಡ್ನಲ್ಲಿ ಕೆ.ಆರ್.ಜಿ ಸಂಸ್ಥೆ ಬಿಡುಗಡೆ ಮಾಡುವ ಎಲ್ಲ ಸಿನಿಮಾಗಳು ಸೂಪರ್ ಹಿಟ್ ಆಗುತ್ತವೆ. ಇದು ಕರ್ನಾಟಕ ಜನತೆಗೆ ತಿಳಿದಿರುವ ವಿಚಾರ. ಸದಭಿರುಚಿಯ ಚಿತ್ರಗಳನ್ನು ಸಿನಿಮಾ ಪ್ರೇಕ್ಷಕರಿಗೆ ತಲುಪಿಸುವ ಕೈಕಂರ್ಯದಲ್ಲಿ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆ ತೊಡಗಿದೆ. ಈ ಸಂಸ್ಥೆಯ ಕಿರೀಟಕ್ಕೆ ಮತ್ತೊಂದು ಗರಿ ಆದಿಪುರುಷ್ ಸಿನಿಮಾವನ್ನು ಕರ್ನಾಟಕದಾದ್ಯಂತ ವಿತರಣೆ ಮಾಡುವ ಹೊಣೆ ಹೊತ್ತಿರೋದು. ದೇಶ, ವಿದೇಶದಾದ್ಯಂತ ಧೂಳೆಬ್ಬಿಸಿದ ಕೆಜಿಎಫ್ 1, ಕೆಜಿಎಫ್ 2, ಕಾಂತಾರ, ಚಾರ್ಲಿ 777, ಗಂಧದ ಗುಡಿ, ವಕೀಲ್ ಸಾಬ್ ಮತ್ತು ದಸರಾ ಮುಂತಾದ ಚಿತ್ರಗಳನ್ನು […]