ಲೋಕಾಯುಕ್ತಕ್ಕೆ ಮತ್ತೆ ಬಂತು ಬಲ: ಎಸಿಬಿ ರದ್ದುಗೊಳಿಸಿ ಕರ್ನಾಟಕ ಹೈ ಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಮಹತ್ವದ ತೀರ್ಪಿನಲ್ಲಿ, ಭ್ರಷ್ಟಾಚಾರ ತಡೆ (ಪಿಸಿ) ಕಾಯ್ದೆಯಡಿ ಲೋಕಾಯುಕ್ತ ಪೊಲೀಸ್ ವಿಭಾಗದ ಅಧಿಕಾರವನ್ನು ಹಿಂತೆಗೆದುಕೊಳ್ಳುವ ಮೂಲಕ 2016 ರಲ್ಲಿ ರಾಜ್ಯ ಸರ್ಕಾರ ರಚಿಸಿದ್ದ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ಕರ್ನಾಟಕ ಹೈಕೋರ್ಟ್ ಗುರುವಾರ ರದ್ದುಗೊಳಿಸಿದೆ. ಎಸಿಬಿ ರಚನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ತಂಡಕ್ಕೆ ಅನುಮತಿ ನೀಡಿದ ನ್ಯಾಯಮೂರ್ತಿ ಬಿ ವೀರಪ್ಪ ಮತ್ತು ನ್ಯಾಯಮೂರ್ತಿ ಕೆ ಎಸ್ ಹೇಮಲೇಖಾ ಅವರಿದ್ದ ವಿಭಾಗೀಯ ಪೀಠ, ಎಸಿಬಿಯಲ್ಲಿ ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳನ್ನು ಈಗ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ವರ್ಗಾಯಿಸಲಾಗುವುದು […]

ಜುಲೈ 19 ರಿಂದ 21 ರವರೆಗೆ ಭ್ರಷ್ಟಾಚಾರ ನಿಗ್ರಹ ದಳದಿಂದ ಅಹವಾಲು ಸ್ವೀಕಾರ

ಉಡುಪಿ: ಉಡುಪಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಜುಲೈ 19 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರ ವರೆಗೆ ಬೈಂದೂರು ಪ್ರವಾಸಿ ಮಂದಿರ ಹಾಗೂ ಮ. 2.30 ರಿಂದ ಸಂಜೆ 4.30 ರ ವರೆಗೆ ಕುಂದಾಪುರ ಪ್ರವಾಸಿ ಮಂದಿರದಲ್ಲಿ, ಜುಲೈ 20 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರ ವರೆಗೆ ಕಾರ್ಕಳ ಪ್ರವಾಸಿ ಮಂದಿರ ಹಾಗೂ ಮ. 2.30 ರಿಂದ ಸಂಜೆ 4.30 ರ ವರೆಗೆ […]

ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ನಿವಾಸ ಸೇರಿದಂತೆ ಐದು ವಿವಿಧ ಸ್ಥಳಗಳ ಮೇಲೆ ಎಸಿಬಿ ದಾಳಿ

ಬೆಂಗಳೂರು: ಜಾರಿ ನಿರ್ದೇಶನಾಲಯದ ವರದಿಯ ಮೇರೆಗೆ ಕರ್ನಾಟಕದಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಮಂಗಳವಾರ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರ ನಿವಾಸ ಸೇರಿದಂತೆ ಐದು ವಿವಿಧ ಸ್ಥಳಗಳ ಮೇಲೆ ದಾಳಿ ನಡೆಸಿದೆ. ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಬಳಿಯ ಅವರ ನಿವಾಸ, ಸಿಲ್ವರ್ ಓಕ್ ಅಪಾರ್ಟ್‌ಮೆಂಟ್‌ನ ಫ್ಲಾಟ್, ಸದಾಶಿವನಗರದ ಅತಿಥಿ ಗೃಹ, ಬನಶಂಕರಿಯಲ್ಲಿರುವ ಜಿಕೆ ಅಸೋಸಿಯೇಟ್ಸ್ ಕಚೇರಿ ಮತ್ತು ನಗರದ ಕಲಾಸಿಪಾಳ್ಯದಲ್ಲಿರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತಂಡಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದು, […]

ಉಡುಪಿಯಲ್ಲಿ ಎಸಿಬಿ ದಾಳಿ: ಸಣ್ಣ ನೀರಾವರಿ ಅಧಿಕಾರಿ ಹರೀಶ್ ಖಜಾನೆಯಲ್ಲಿ 1.5 ಕೆಜಿ ಚಿನ್ನ, ಮುಕ್ಕಾಲು ಕೆಜಿ ಬೆಳ್ಳಿ!

ಉಡುಪಿ: ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಉಪವಿಭಾಗ ಇಲಾಖೆಯ ಸಹಾಯಕ ಅಭಿಯಂತರ ಹರೀಶ್ ಅವರ ಕೊರಂಗ್ರಪಾಡಿಯ ಬೈಲೂರು ನಿವಾಸಕ್ಕೆ ಶುಕ್ರವಾರ ಬೆಳಿಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಹರೀಶ ಖಜಾನೆಯಲ್ಲಿ 1.5 ಕೆಜಿ ಚಿನ್ನ, ಮುಕ್ಕಾಲು ಕೆಜಿ ಬೆಳ್ಳಿ ಪತ್ತೆಯಾಗಿದೆ. ಇದರ ಜೊತೆಗೆ ಇನ್ನೋವಾ, ಆಲ್ಟೋ ಕಾರುಗಳು ಹಾಗೂ 2 ದ್ವಿಚಕ್ರ ವಾಹನಗಳು ಪತ್ತೆಯಾಗಿವೆ. 4.30 ಲ.ರೂ ನಗದು ಹಾಗೂ ಹಲವಾರು ದಾಖಲೆ ಪತ್ರಗಳು ಅಧಿಕಾರಿಗಳಿಗೆ ದೊರೆತಿವೆ. ಹಾವಂಜೆ ಮತ್ತು ಪೆರ್ಡೂರಿನಲ್ಲಿ ಪತ್ನಿಯ ಹೆಸರಿನಲ್ಲಿ 5 […]

ಎಸಿಬಿ ಯಿಂದ ಅಹವಾಲು ಸ್ವೀಕಾರ

ಉಡುಪಿ, ಜೂನ್ 27: ಉಡುಪಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಅಧಿಕಾರಿ ಸಿಬ್ಬಂದಿಯವರು ಜೂನ್ 28 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಬೈಂದೂರು ಪ್ರವಾಸಿ ಮಂದಿರದಲ್ಲಿ ಹಾಗೂ ಮಧ್ಯಾಹ್ನ 2.30 ರಿಂದ ಸಾಯಂಕಾಲ 4.30 ರವರೆಗೆ ಕುಂದಾಪುರ ಪ್ರವಾಸಿ ಮಂದಿರದಲ್ಲಿ ಮತ್ತು ಜೂನ್ 29 ರಂದು ಬೆಳಿಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಕಾರ್ಕಳ ಪ್ರವಾಸಿ ಮಂದಿರದಲ್ಲಿ ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 4.30 ರವರೆಗೆ ಹೆಬ್ರಿ ಪ್ರವಾಸಿ ಮಂದಿರದಲ್ಲಿ […]