ಮಂಗಳೂರು: ಹಿಟ್ ಎಂಡ್ ರನ್ ಪ್ರಕರಣಕ್ಕೆ ಯುವತಿ ಬಲಿ; ನಾಲ್ವರಿಗೆ ಗಾಯ

ಮಂಗಳೂರು: ಮಂಗಳೂರು ನಗರದಲ್ಲಿ ಬುಧವಾರ ಸಂಜೆ ನಡೆದ ಕಾರಿನ ಭೀಕರ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಯುವತಿಯೋರ್ವಳು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದರೆ ಉಳಿದ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ನಗರದ ಲೇಡಿ ಹಿಲ್-ಮಣ್ಣಗುಡ್ಡ ಮುಖ್ಯ ರಸ್ತೆಯ ಈಜುಕೊಳ ಮುಂಭಾಗದಲ್ಲಿ ಈ ದುರ್ಘಟನೆ ಸಂಭವಿಸಿದ್ದು ಮೃತ ಯುವತಿಯನ್ನು ಸುರತ್ಕಲ್ ಬಾಳದ ರೂಪಶ್ರೀ (23) ಎಂದು ಗುರುತ್ತಿಸಲಾಗಿದೆ. ಸ್ವಾತಿ(26) ಹಿತಾನ್ವಿ(16), ಕೃತಿಕಾ(16), ಯತಿಕಾ(12) ಗಂಭೀರ ಗಾಯಗೊಂಡ ಇತರ ನಾಲ್ವರು ಯುವತಿಯರಾಗಿದ್ದು ಇವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬುಧವಾರ ಅಪರಾಹ್ನ […]

ಕಾರ್ಕಳ: ಚಲಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಚಿರತೆ ಸಾವು

ಕಾರ್ಕಳ: ಕಾಡಿನ ಮಧ್ಯದಿಂದ ಹಠಾತ್ತನೆ ಚಿರತೆಯೊಂದು ರಸ್ತೆಗೆ ನುಗ್ಗಿ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆ ಪರಿಣಾಮ ಸಾವನಪ್ಪಿದೆ. ಘಟನೆಯು ಹೆಬ್ರಿ ತಾಲೂಕಿನ ಮುದ್ರಾಡಿ ಕಾರ್ಕಳ ರಸ್ತೆಯ ಭಕ್ರೆ ಮಠ ಕ್ರಾಸ್ ಬಳಿ ಗುರುವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಕಾರ್ಕಳದಿಂದ ಮುದ್ರಾಡಿ ಕಡೆಗೆ ವೇಗವಾಗಿ ಸಂಚರಿಸುತ್ತಿದ್ದ ಕಾರು ರಸ್ತೆ ಕಡೆಗೆ ಹಠಾತ್ತಾಗಿ ನುಗ್ಗಿದ ಚಿರತೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಚಿರತೆ ಸ್ಥಳದಲ್ಲೇ ಸಾವನ್ನಪ್ಪಿದೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ […]

ಮಂಗಳೂರು: ಬಸ್ ನಿಂದ ಆಯತಪ್ಪಿ ರಸ್ತೆಗೆ ಬಿದ್ದು ಕಂಡಕ್ಟರ್ ಮೃತ್ಯು

ಮಂಗಳೂರು: ಇಲ್ಲಿನ ಸಿಟಿಬಸ್ ನಲ್ಲಿ ಬಾಗಿಲ ಬಳಿ ನಿಂತಿದ್ದ ಬಸ್ ಕಂಡಕ್ಟರ್ ಆಯತಪ್ಪಿ ಬಿದ್ದು ಸಾವನಪ್ಪಿರುವ ಘಟನೆ ಮಂಗಳವಾರದಂದು ನಂತೂರ್ ಸರ್ಕಲ್ ಬಳಿ ನಡೆದಿದೆ. ಮೃತ ಕಂಡಕ್ಟರ್ ನನ್ನು ಈರಯ್ಯ(23) ಎಂದು ಗುರುತಿಸಲಾಗಿದೆ. ಮಂಗಳವಾರ ಮಧ್ಯಾಹ್ನ ಸಿಟಿ ಬಸ್ ಪದುವದಿಂದ ಶಿವಭಾಗ್ ಕಡೆ ಹೋಗುವ ಸಂದರ್ಭ ನಂತೂರು ವೃತ್ತದ ಬಳಿ ಬಸ್ಸಿನ ಎದುರಿನ ಬಾಗಿಲ ಬಳಿ ನಿಂತಿದ್ದ ಈರಯ್ಯ ಆಯತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಪೊಲೀಸರು ಈರಯ್ಯನನ್ನುಆಟೋ ಮೂಲಕ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ […]

ಕಾರುಗಳ ಮಧ್ಯೆ ಅಪಘಾತ: ನಾಲ್ವರಿಗೆ ಗಂಭೀರ ಗಾಯ

ಉಡುಪಿ: ಓವರ್ ಟೇಕ್ ಮಾಡುವ ಭರದಲ್ಲಿ ಅಪಘಾತ ಸಂಭವಿಸಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೆಬ್ರಿ ತಾಲೂಕಿನ ನಾಡ್ಪಾಲು ಜಕ್ಕನಮಕ್ಕಿ ಎಂಬಲ್ಲಿ ನಡೆದಿದೆ. ಬೈಕನ್ನು ಕಾರೊಂದು ಓವರ್ ಟೇಕ್ ಮಾಡುವಾಗ ಮುಂದಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ನಾಲ್ಕು ಮಂದಿ ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ಕಾರುಗಳು ಹಾಗೂ ಬೈಕ್ ನುಜ್ಜುಗುಜ್ಜಾಗಿವೆ. ಸ್ಥಳಕ್ಕೆ ಹೆಬ್ರಿ ಪಿಎಸ್ಐ ಮಹೇಶ್‌ ಟಿಎಂ ಭೇಟಿ ನೀಡಿದ್ದು ಪ್ರಕರಣ ದಾಖಲಾಗಿದೆ. ಅಪಘಾತದಿಂದ ಉಡುಪಿ ಹೆಬ್ರಿ ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು […]

ಮಣಿಪಾಲ: ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು

ಮಣಿಪಾಲ: ಇಲ್ಲಿನ ಲಕ್ಷ್ಮೀಂದ್ರ ನಗರದಲ್ಲಿ ಇಂದು ಬೆಳ್ಳಂಬೆಳಗ್ಗೆ ಕಾರೊಂದು ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿರುವ ಘಟನೆ ನಡೆದಿದೆ. ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಗಾಯಾಳು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಾರಿನಲ್ಲಿದ್ದವರ ಮಾಹಿತಿ ಲಭ್ಯವಿಲ್ಲ. ಡಿಕ್ಕಿಯ ರಭಸಕ್ಕೆ ಬೊನೆಟ್ ಮತ್ತು ಬಂಪರ್ ಕಿತ್ತು ಹೋಗಿದೆ. ಮಣಿಪಾಲ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.