ಸಾಲಿಗ್ರಾಮದಲ್ಲಿ ಸ್ಕೂಟರ್ ಗೆ ಬಸ್ ಢಿಕ್ಕಿ; ಸವಾರ ಸಾವು

ಕುಂದಾಪುರ: ಬಸ್ಸೊಂದು ಸ್ಕೂಟರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಸಾಲಿಗ್ರಾಮ ಆಂಜನೇಯ ದೇವಸ್ಥಾನದ ತಿರುವಿನ ಬಳಿ ನಡೆದಿದೆ. ಮೃತರನ್ನು ಬನ್ನಾಡಿ ಗ್ರಾಮದ ಬಡಾಬೆಟ್ಟು ಉಪ್ಲಾಡಿ ನಿವಾಸಿ 56 ವರ್ಷದ ಶೀನ ಪೂಜಾರಿ ಎಂದು ಗುರುತಿಸಲಾಗಿದೆ. ಮೇ 6ರಂದು ರಾತ್ರಿ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಇವರ ಸ್ಕೂಟರ್‌ಗೆ ಉಡುಪಿ ಕಡೆಯಿಂದ ಕುಂದಾಪುರದ ಕಡೆಗೆ ಬರುತ್ತಿದ್ದ ಬಸ್ ಢಿಕ್ಕಿ ಹೊಡೆದಿದೆ. ಇದರಿಂದಾಗಿ ಸ್ಕೂಟರ್ ಸಮೇತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಶೀನ ಪೂಜಾರಿ, […]
ಕುಸಿದ ಕಾಂಕ್ರೀಟ್ ರಸ್ತೆ; ಪಲ್ಟಿಯಾಗಿ ಹೊಳೆಗೆ ಬಿದ್ದ ಟಿಪ್ಪರ್

ಉಡುಪಿ: ಕಾಂಕ್ರೀಟ್ ರಸ್ತೆ ಕುಸಿದ ಪರಿಣಾಮ ಚಲಿಸುತ್ತಿದ್ದ ಟಿಪ್ಪರೊಂದು ಪಲ್ಟಿಯಾಗಿ ಸಮೀಪದ ಹೊಳೆಗೆ ಬಿದ್ದ ಘಟನೆ ಉಡುಪಿ ಸಮೀಪದ ಕಿದಿಯೂರು ಸಂಕೇಶ್ವರ ರಸ್ತೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಮಣ್ಣು ತುಂಬಿದ ಟಿಪ್ಪರೊಂದು ಸಂಚರಿಸುತ್ತಿದ್ದಾಗ ಕಾಂಕ್ರೀಟ್ ರಸ್ತೆ ಕುಸಿದು ಪಲ್ಟಿಯಾಯಿತು ಎಂದು ತಿಳಿದುಬಂದಿದೆ. ರಸ್ತೆಯಲ್ಲಿ ಬಿರುಕು ಬಿಟ್ಟಿದ್ದು, ಸಂಪೂರ್ಣವಾಗಿ ಕುಸಿದ ಪರಿಣಾಮ ಟಿಪ್ಪರ್ ಸಮೀಪದ ಕಲ್ಮಾಡಿ ಹೊಳೆಗೆ ಉರುಳಿ ಬಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಅಪಘಾತದಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.
ನಿರ್ಲಕ್ಷ್ಯತನದಿಂದ ಬಸ್ ಚಲಾಯಿಸಿ ಸಾವು : ಆರೋಪಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ

ಉಡುಪಿ: ಅತೀ ವೇಗ, ನಿರ್ಲಕ್ಷ್ಯತನ ಹಾಗೂ ಅಜಾಗರೂಕತೆಯಿಂದ ಬಸ್ಸನ್ನು ಚಲಾಯಿಸಿ, ಅಪಘಾತಪಡಿಸಿ, ಸಾವಿಗೆ ಕಾರಣವಾದ ಆರೋಪಿಗೆ ನಗರದ ಒಂದನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2017 ಜನವರಿ 09 ರಂದು ಬೆಳಗ್ಗೆ 5.20 ಸುಮಾರಿಗೆ ಉಡುಪಿ ತಾಲೂಕು ಪುತ್ತೂರು ಗ್ರಾಮದ ಸಂತೆಕಟ್ಟೆ ಹೈವೆ ಗ್ಯಾರೇಜ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಭಾಕರ ಎಂಬಾತನು ಕೆನರಾ ಟೂರಿಸ್ಟ್ ಬಸ್ಸನ್ನು ನಿರ್ಲಕ್ಷ್ಯತನದಿಂದ ಚಲಾಯಿಸಿ, ರಸ್ತೆ ಬದಿ ನಿಂತಿದ್ದ ನಾಗರಾಜ ಎಂಬಾತನಿಗೆ ಢಿಕ್ಕಿ ಹೊಡೆದ […]
ಪಡುಬಿದ್ರಿ ಬಳಿ ಬೈಕ್‌ಗೆ ಟೆಂಪೋ ಢಿಕ್ಕಿ; ಗಾಯಾಳು ಯುವಕ ಆಸ್ಪತ್ರೆಯಲ್ಲಿ ಸಾವು

ಉಡುಪಿ: ಪಡುಬಿದ್ರಿ ಬಳಿ ಬೈಕ್‌ಗೆ ಟೆಂಪೋ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಪಲಿಮಾರು ನಿವಾಸಿ ಖಲಂದರ್ ರಫೀಕ್ ಶನಿವಾರ ಮುಂಜಾನೆ ಮೃತಪಟ್ಟಿದ್ದಾರೆ. ಶುಕ್ರವಾರ ಮಧ್ಯಾಹ್ನ ಎರ್ಮಾಳು ಮಸೀದಿಯಿಂದ ಪಡುಬಿದ್ರಿ ಕಡೆಗೆ ತನ್ನ ಬೈಕ್ ನಲ್ಲಿ ಹೋಗುತ್ತಿದ್ದಾಗ ಹಿಂಬದಿಯಿಂದ ಟೆಂಪೋ ಒಂದು ಬಂದು ಢಿಕ್ಕಿ ಹೊಡೆದಿತ್ತು. ಅಪಘಾತದಿಂದ ತೀವ್ರವಾಗಿ ಗಾಯಗೊಂಡಿದ್ದ ಖಲಂದರ್ ರಫೀಕ್ ಅನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ ಮುಂಜಾನೆ ಆತ ಅಸುನೀಗಿದ್ದು, ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಸ್- ಲಾರಿ ಮುಖಾಮುಖಿ ಢಿಕ್ಕಿ ಹಲವರಿಗೆ ಗಾಯ, ಚಾಲಕರು ಗಂಭೀರ

ಮಂಗಳೂರು: ಬಸ್-ಲಾರಿ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡಿರುವ ಘಟನೆ ಮೂಡಬಿದ್ರೆಯ ತೋಡಾರು ಮಸೀದಿ ಬಳಿ ಮಂಗಳವಾರ ಸಂಭವಿಸಿದೆ. ಬಸ್ ಮೂಡಬಿದಿರೆಯಿಂದ ಮಂಗಳೂರು ಕಡೆಗೆ ಹಾಗೂ ಲಾರಿ ಮಂಗಳೂರಿಂದ ಮೂಡಬಿದಿರೆ ಕಡೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಬಸ್ ಹಾಗೂ ಲಾರಿ ಚಾಲಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಹೊರತೆಗೆಯಲು ಹರಸಹಾಸ ಪಡಬೇಕಾಯಿತು. ಅಲ್ಲದೇ ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಹಿತ ಗಾಯಗಳಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಲಾರಿಯ ಮುಂಭಾಗ ಪೂರ್ಣ ಜಖಾಂ ಆಗಿವೆ. ಘಟನೆಯಿಂದ ಕೆಲ […]