ಸ್ಕೂಟಿಗೆ ಢಿಕ್ಕಿ ಹೊಡೆದು 7 ಕಿ.ಮೀ ಎಳೆದೊಯ್ದು ಯುವತಿಯ ಸಾವಿಗೆ ಕಾರಣವಾಯ್ತು ಕುಡಿದ ಮತ್ತಿನ ವಾಹನ ಚಲಾವಣೆ

ದೆಹಲಿ: ಭಾನುವಾರ ಮುಂಜಾನೆ ದೆಹಲಿಯ ಸುಲ್ತಾನ್‌ಪುರಿಯಲ್ಲಿ ಕಾರೊಂದು ಸ್ಕೂಟಿಗೆ ಢಿಕ್ಕಿ ಹೊಡೆದು ಸುಮಾರು ಏಳು ಕಿಲೋಮೀಟರ್‌ಗಳವರೆಗೆ ಎಳೆದೊಯ್ದ ಪರಿಣಾಮ 20 ವರ್ಷದ ಯುವತಿಯೊಬ್ಬರು ಸಾವನ್ನಪ್ಪಿದ್ದಾರೆ. ಅಪಘಾತದ ಸಮಯದಲ್ಲಿ ಮದ್ಯದ ಅಮಲಿನಲ್ಲಿದ್ದ ದೀಪಕ್ ಖನ್ನಾ (26), ಅಮಿತ್ ಖನ್ನಾ (25), ಕ್ರಿಶನ್ (27), ಮಿಥುನ್ (26) ಮತ್ತು ಮನೋಜ್ ಮಿತ್ತಲ್ (27) ಈ ಐವರನ್ನು ನಿರ್ಲಕ್ಷದ ಸಾವಿಗೆ ಕಾರಣರಾದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಭೀಕರ ಅಪಘಾತಕ್ಕೆ ಸಂಬಂಧಿಸಿದಂತೆ ದೆಹಲಿ ಮಹಿಳಾ ಆಯೋಗವು ದೆಹಲಿ […]
ಕ್ರಿಕೆಟ್ ಆಟಗಾರ ರಿಷಭ್ ಪಂತ್ ಬಿಎಂಡಬ್ಲ್ಯು ಕಾರು ಡಿವೈಡರ್‌ಗೆ ಡಿಕ್ಕಿ: ಕಾರಿನಲ್ಲಿ ಬೆಂಕಿ; ಗಂಭೀರ ಗಾಯ

ರೂರ್ಕಿ: ಭಾರತೀಯ ಕ್ರಿಕೆಟಿಗ ರಿಷಬ್ ಪಂತ್ ಅವರ ಕಾರು ದೆಹಲಿಯಿಂದ ಮನೆಗೆ ಮರಳುತ್ತಿದ್ದಾಗ ಅಪಘಾತಕ್ಕೀಡಾಗಿದೆ. ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಅವರ ಕಾರು ಅಪಘಾತಕ್ಕೀಡಾಯಿತು. ಪ್ರಾಥಮಿಕ ಮಾಹಿತಿಯ ಪ್ರಕಾರ, ರಿಷಬ್ ಅವರನ್ನು ಮೊದಲು ರೂರ್ಕಿಯ ಸಕ್ಷಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರನ್ನು ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವರದಿಗಳ ಪ್ರಕಾರ, ಅವರ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ ಮತ್ತು ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಪಂತ್ ತಮ್ಮ ಬಿಎಂಡಬ್ಲ್ಯು ಕಾರನ್ನು ಚಲಾಯಿಸುತ್ತಿದ್ದಾಗ ಘಟನೆ ಸಂಭವಿಸಿದೆ. ಅವರು […]
ಕುಂದಾಪುರ: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕ್ರೇನ್; ಸ್ಥಳದಲ್ಲೇ ಅಸುನೀಗಿದ ಸಹಸವಾರ

ಕುಂದಾಪುರ: ಚಲಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕ್ರೇನ್ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನನಲ್ಲಿದ್ದ ಹಿಂಬದಿ ಸವಾರ ಸ್ಥಳದಲ್ಲೇ ಅಸುನೀಗಿದ ಘಟನೆ ಕುಂದಾಪುರ ತಾಲೂಕಿನ ಬಳ್ಕೂರು ಗ್ರಾಮದ ಪಾನಕದಕಟ್ಟೆ ಎಂಬಲ್ಲಿ ಡಿ.26ರಂದು ರಾತ್ರಿ ನಡೆದಿರುವುದಾಗಿ ವರದಿಯಾಗಿದೆ. ತಾಲೂಕಿನ ಹುಣಸೆಮಕ್ಕಿ ಸಮೀಪದ ಹೊಂಬಾಡಿ ನಿವಾಸಿ ಪ್ರಶಾಂತ್ ಮೊಗವೀರ (31) ಮೃತಪಟ್ಟವರು ಎಂದು ಗುರುತಿಸಲಾಗಿದೆ. ದಿನೇಶ್ ಪೂಜಾರಿ ಎಂಬವರ ದ್ವಿಚಕ್ರ ವಾಹನದ ಹಿಂಬದಿಯಲ್ಲಿ ಕುಳಿತಿದ್ದ ಪ್ರಶಾಂತ್, ಕುಂದಾಪುರ ಕಡೆಯಿಂದ ಸಿದ್ದಾಪುರ ಕಡೆಗೆ ತೆರಳುತ್ತಿದ್ದಾಗ ನೋಂದಣಿ ಸಂಖ್ಯೆ ಇಲ್ಲದ ಹೊಸ […]
ಕುದುರೆ ಸವಾರನಿಗೆ ಬಸ್ ಡಿಕ್ಕಿ: ಕುದುರೆ ಸಾವು; ಸವಾರನಿಗೆ ಗಾಯ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸೊಂದು ಕುದುರೆ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಕುದುರೆಯು ಸಾವನಪ್ಪಿದ್ದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಇಳಂತಿಲ ಗ್ರಾಮದ ಪದುಮಲೆ ಎಂಬಲ್ಲಿ ಭಾನುವಾರ ನಡೆದಿದೆ. ಸಚಿನ್ ಪೆಲಪ್ಪಾರು ಗಾಯಗೊಂಡ ಕುದುರೆ ಸವಾರರಾಗಿದ್ದಾರೆ. ಉಪ್ಪಿನಂಗಡಿಯಲ್ಲಿ ಸಚಿನ್ ಕುದುರೆ ಸವಾರಿ ಮಾಡುತ್ತಿದ್ದ ವೇಳೆ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಸರ್ಕಾರಿ ಬಸ್ಸೊಂದು ಕುದುರೆಗೆ ಢಿಕ್ಕಿ ಹೊಡೆದ ಪರಿಣಾಮ ಕುದುರೆ ಹಾಗೂ ಸವಾರ ಗಾಯಗೊಂಡಿದ್ದು, ಇಬ್ಬರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಪ್ಪಿನಂಗಡಿ ಸಮೀಪ ಪಿಲಿಗೂಡಿನ […]
ಪೆರ್ಡೂರು: ಟಿಪ್ಪರ್ ಡಿಕ್ಕಿ ಹೊಡೆದು ವೃದ್ಧ ಸ್ಥಳದಲ್ಲೇ ಸಾವು

ಪೆರ್ಡೂರು: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧರೋರ್ವರಿಗೆ ಟಿಪ್ಪರ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಪೆರ್ಡೂರು ಮೇಲ್ಪೇಟೆಯ ಬಿಎಮ್ ಸ್ಕೂಲ್ ಎದುರು ಇಂದು ಬೆಳಿಗ್ಗೆ ನಡೆದಿದೆ. ಮೃತರನ್ನು ಅಲಂಕಾರು ನಿವಾಸಿ 70 ವರ್ಷದ ಮಂಜಯ್ಯ ಶೆಟ್ಟಿ ಎಂದು ಗುರುತಿಸಲಾಗಿದೆ. ಪೆರ್ಡೂರಿನಿಂದ ಹಿರಿಯಡಕ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಒಂದು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಂಜಯ್ಯ ಶೆಟ್ಟಿಗೆ ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ ರಸ್ತೆಗೆ ಬಿದ್ದ ಮಂಜಯ್ಯ ಶೆಟ್ಟಿ ಅವರ ತಲೆ ಮೇಲೆ ಟಿಪ್ಪರ್ ನ ಚಕ್ರ […]