ಭತ್ತದ ಮೋಟೆ ಹೊತ್ತಿದ್ದ ಲಾರಿ ಕಾರಿನ ಮೇಲೆ ಪಲ್ಟಿ: ಪ್ರಯಾಣಿಕರು ಪವಾಡ ಸದೃಶ ಪಾರು

ಪರ್ಕಳ: ಇಲ್ಲಿನ ರಸ್ತೆ ಅವ್ಯವಸ್ಥೆಯಿಂದಾಗಿ ಕೆಳಪರ್ಕಳದಲ್ಲಿ ಭತ್ತದ ಮೂಟೆಗಳನ್ನು ಹೊತ್ತೊಯ್ಯುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಎರಡು ಪ್ರವಾಸಿ ಕಾರುಗಳ ಮೇಲೆ ಪಲ್ಟಿಯಾಗಿದೆ. ಇದರಲ್ಲಿ ಒಂದು ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಲಾರಿಯಲ್ಲಿದ್ದ ಭತ್ತದ ಮೂಟೆಗಳು ರಸ್ತೆಯ ತುಂಬೆಲ್ಲಾ ಚೆಲ್ಲಾಪಿಲ್ಲಿಯಾಗಿ ಪ್ರಯಾಣಿಕರು ಕೆಲಹೊತ್ತು ಪರದಾಡಿದರು. ಕಾರಿನಲ್ಲಿದ್ದವರು ಪವಾಡಸದೃಶರಾಗಿ ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಇಲ್ಲಿನ ಮಣಿಪಾಲ- ಪರ್ಕಳ ಹೆದ್ದಾರಿಯಲ್ಲಿ ರಸ್ತೆ ಕಾಮಗಾರಿಗಳು ನಡೆಯುತ್ತಿದ್ದು, ಬೇರೆ ಜಿಲ್ಲೆ ಅಥವಾ ರಾಜ್ಯಗಳಿಂದ ಆಗಮಿಸುವ ವಾಹನ ಚಾಲಕರು ಉಡುಪಿಯಿಂದ ಕಾರ್ಕಳಕ್ಕೆ ತೆರಳುವಾಗ ಗೊಂದಲಕ್ಕೆ […]

ಕಟಪಾಡಿ: ಬೈಕ್ ಗೆ ಲಾರಿ ಢಿಕ್ಕಿ; ಸಹಸವಾರ ಮೃತ್ಯುವಶ

ಕಟಪಾಡಿ: ಸ್ಕೂಟರ್‌ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸಹಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿ ಜಂಕ್ಷನ್ ನಲ್ಲಿ ಶುಕ್ರವಾರ ನಡೆದಿದೆ. ಮೃತರನ್ನು ಉದ್ಯಾವರ ಬೊಳ್ಜೆಯ ಮೂಲದ ಸುಶಿಕ್ಷಿತ್ (20) ಎಂದು ಗುರುತಿಸಲಾಗಿದೆ. ಸುಶಿಕ್ಷಿತ್ ತನ್ನ ಗೆಳೆಯ ಜಯದೀಪ್ ಜೊತೆಗೆ ಕೆಟರೀಂಗ್ ಕೆಲಸಕ್ಕಾಗಿ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಬೈಕ್ ಲಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಸುಶಿಕ್ಷಿತ್ ನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಅಫಘಾತದಿಂದ […]

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಟ್ರಕ್: 40ಕ್ಕೂ ಹೆಚ್ಚು ವಾಹನಗಳು ಜಖಂ, 6 ಮಂದಿಗೆ ಗಾಯ

ಪುಣೆ: ಪುಣೆ-ಬೆಂಗಳೂರು ಹೆದ್ದಾರಿಯ ನವಲೆ ಸೇತುವೆಯಲ್ಲಿ ಭಾನುವಾರದಂದು ರಾತ್ರಿ ಟ್ರಕ್ ಒಂದು ನಿಯಂತ್ರಣ ತಪ್ಪಿ ಸೇತುವೆಯ ಮೇಲೆ ಟ್ರಾಫಿಕ್‌ನಲ್ಲಿ ಸಿಲುಕಿದ್ದ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ 6 ಜನರು ಗಾಯಗೊಂಡಿದ್ದಾರೆ, ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. #WATCH | Maharashtra: 6 people were injured in an accident at Navale bridge on the Pune-Bengaluru highway in Pune last night where a truck lost control & rammed […]

ಬಸ್ ಮತ್ತು ಗೂಡ್ಸ್ ಟೆಂಪೊ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಉಡುಪಿ: ಇಲ್ಲಿನ ಶಿರಿಬೀಡಿನಲ್ಲಿ ಬಸ್ ಮತ್ತು ಗೂಡ್ಸ್ ಟೆಂಪೊ ರಿಕ್ಷಾ ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರದಂದು ನಡೆದಿದೆ. ಕರಾವಳಿ ಬೈಪಾಸ್ ಕಡೆಯಿಂದ ಮಣಿಪಾಲ ಕಡೆ ಹೋಗುತ್ತಿದ್ದ ಖಾಸಗಿ ಬಸ್ ಒಂದು ಶಿರಿಬೀಡು ಜಂಕ್ಷನ್ ಸಮೀಪ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಿಂದ ಬರುತ್ತಿದ್ದ ಗೂಡ್ಸ್ ಟೆಂಪೋ ರಿಕ್ಷಾ ಬಸ್ಸಿಗೆ ಢಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ಅಪಘಾತದಿಂದ ಗೂಡ್ಸ್ ರಿಕ್ಷಾ ಚಾಲಕ ಹಾಗೂ ಸಹಸವಾರನಿಗೆ ತೀವ್ರ ಗಾಯಗಳಾಗಿದ್ದು ಅವರನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. […]

ಕಿನ್ನಿಗೋಳಿ: ಪಾದಾಚಾರಿ ಮಹಿಳೆಗೆ ಗುದ್ದಿದ ಕಾರು; ಗಂಭೀರ ಗಾಯ

ಕಿನ್ನಿಗೋಳಿ: ದಾರಿಯಲ್ಲಿ ನಡೆದುಕೊಂದು ಹೋಗುತ್ತಿದ್ದ ಮಹಿಳೆಯೊಬ್ಬರಿಗೆ ಕಾರೊಂದು ಗುದ್ದಿದ್ದು, ಗಂಭೀರ ಗಾಯಗಳಾಗಿವೆ ಎಂದು ವರದಿಯಾಗಿದೆ. ಗಾಯಗೊಂಡ ಮಹಿಳೆಯನ್ನು ಕೆಮ್ರಾಲ್ ಮನೋಲಿ ಬಲ್ಲೆ ನಿವಾಸಿ ಜಯಂತಿ ಶೆಟ್ಟಿ ಎಂದು ಗುರುತಿಸಲಾಗಿದೆ. ಗುರುವಾರದಂದು ಕಿನ್ನಿಗೋಳಿ ಚರ್ಚ್ ಬಳಿ ಸಂತೆ ಮಾರುಕಟ್ಟೆ ನಡೆಯುತ್ತಿದ್ದು, ಜಯಂತಿ ಶೆಟ್ಟಿ ಎಂಬವರು ತರಕಾರಿ ಹಿಡಿದುಕೊಂಡು ನಡೆದು ಬರುತ್ತಿದ್ದ ಸಂದರ್ಭದಲ್ಲಿ ಕಿನ್ನಿಗೋಳಿ ಪೇಟೆಯಿಂದ ಮೂರುಕಾವೇರಿ ಕಡೆಗೆ ವೇಗವಾಗಿ ತೆರಳುತ್ತಿದ್ದ ಬ್ರೀಜಾ ಕಾರು ಮಹಿಳೆಗೆ ಗುದ್ದಿದ್ದು, ಮಹಿಳೆಯು ಎತ್ತಿ ಎಸೆಯಲ್ಪಟ್ಟಿರುವುದರಿಂದ  ಗಂಭೀರ ಗಾಯಗಳಾಗಿವೆ. ಕಾರು ಪಕ್ಕದ ಕಟ್ಟೆಗೆ ಡಿಕ್ಕಿ […]