ನಟ ಪ್ರಮೋದ್ ಶೆಟ್ಟಿ ಕುಟುಂಬದವರಿಂದ ಶ್ರೀಕೃಷ್ಣ ಮಠ ಭೇಟಿ

ಉಡುಪಿ: ಕನ್ನಡ ಚಲನಚಿತ್ರ ನಟ ಪ್ರಮೋದ್ ಶೆಟ್ಟಿಯವರು ಕುಟುಂಬ ಸಮೇತರಾಗಿ ಶ್ರೀಕೃಷ್ಣಮಠಕ್ಕಾಗಮಿಸಿ ಕೃಷ್ಣದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ನಾರಾಯಣ ಶರಳಾಯ ಉಪಸ್ಥಿತರಿದ್ದರು.

ನಟ, ನಿರ್ದೇಶಕ ಸೂರ್ಯೋದಯ ಪೆರಂಪಳ್ಳಿ ಪುತ್ರ ರಸ್ತೆ ಅಪಘಾತದಲ್ಲಿ ಮೃತ್ಯು

ಬೆಂಗಳೂರು: ಕನ್ನಡದ ನಟ ಹಾಗೂ ನಿರ್ದೇಶಕ ಸೂರ್ಯೋದಯ ಪೆರಂಪಳ್ಳಿ ಅವರ ಪುತ್ರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಸೂರ್ಯೋದಯ ಪುತ್ರ ಮಯೂರ್ (20) ಬೆಂಗಳೂರಿನ ಬ್ಯಾಡರಹಳ್ಳಿಯ ನ್ಯೂ ಲಿಂಕ್ ರಸ್ತೆಯಲ್ಲಿ ಕೆಟಿಎಂ ಬೈಕಿನಲ್ಲಿ ತೆರಳಿತ್ತಿರುವಾಗ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದ್ದು, ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಟ ಸೂರ್ಯೋದಯ ಅವರು ಮೂಲತಃ ಉಡುಪಿ ಜಿಲ್ಲೆಯ ಪೆರಂಪಳ್ಳಿ ಅವರಾಗಿದ್ದು. ದೇಯಿ ಬೈದೆತಿ ಎಂಬ ಐತಿಹಾಸಿಕ‌ ತುಳು ಚಿತ್ರವನ್ನು […]