ಮಕ್ಕಳ ಆರೋಗ್ಯ ಸದೃಢತೆಗೆ ಕಬಡ್ಡಿ ಪೂರಕ: ಅದಮಾರು ಶ್ರೀ
ಉಡುಪಿ: ಕಬಡ್ಡಿಯಿಂದ ಮಕ್ಕಳ ಏಕಾಗೃತೆ ವೃದ್ಧಿಯಾಗುವುದರ ಜತೆಗೆ ಅವರ ಮಾನಸಿಕ ಹಾಗೂ ದೈಹಿಕ ಆರೋಗ್ಯ ಕೂಡ ಸದೃಢಗೊಳ್ಳುತ್ತದೆ ಎಂದು ಅದಮಾರು ಮಠದ ವಿಶ್ವಪ್ರಿಯ ಸ್ವಾಮೀಜಿ ಹೇಳಿದರು. ಉಡುಪಿ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಆಶ್ರಯದಲ್ಲಿ ಕಾಲೇಜಿನ ಮೈದಾನದಲ್ಲಿ ಬುಧವಾರ ಏರ್ಪಡಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಅಂತರ ಕಾಲೇಜು ಮಟ್ಟದ ಪುರುಷರ ಆಹ್ವಾನಿತ ತಂಡಗಳ ಹೊನಲು ಬೆಳಕಿನ ಕಬಡ್ಡಿ ಪಂದ್ಯಕೂಟ ಶ್ರೀ ಪ್ರಜ್ಞಾ ಟ್ರೋಫಿ—2019 ಕ್ಕೆ ಚಾಲನೆ ನೀಡಿ ಮಾತನಾಡಿದರು. ಮನುಷ್ಯರ ಆರೋಗ್ಯ ಚೆನ್ನಾಗಿರಬೇಕಾದರೆ ಮಣ್ಣಿನ ಸಂಪರ್ಕ ಕೂಡ ಇರಬೇಕೆಂದು ಹಿರಿಯರು […]