ಸೂಕ್ತ ಮಾರುಕಟ್ಟೆ ದರ ನಿಗದಿಯಾದರೆ ಕೃಷಿ ಲಾಭದಾಯಕ: ಹಿರಿಯಡಕದಲ್ಲಿ ಜಯಪ್ರಕಾಶ್ ಹೆಗ್ಡೆ
ಸರಕಾರವು ಸೂಕ್ತ ಮಾರುಕಟ್ಟೆ ದರ ನಿಗದಿಪಡಿಸಿದರೆ ಕೃಷಿ ಲಾಭದಾಯಕವಾಗಲು ಸಾಧ್ಯ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ತಿಳಿಸಿದ್ದಾರೆ. ಅವರು ಹಿರಿಯಡ್ಕ ಶ್ರೀವೀರಭದ್ರ ದೇವಸ್ಥಾನದ ಆವರಣದಲ್ಲಿ ನಡೆದ ಕೃಷಿ ಮೇಳದ ಸಮಾರೋಪದಲ್ಲಿ ಮಾತನಾಡಿದರು. ಕೃಷಿ ಉತ್ಪನ್ನಗಳಿಗೆ ನಿಶ್ಚಿತ ದರ ಸಿಕ್ಕರೆ ರೈತರು ಸಾಲದ ಮೊರೆ ಹೋಗುವುದು ತಪ್ಪಲಿದೆ. ವಿದೇಶದಿಂದ ಭಾರತಕ್ಕೆ ಅಡಕೆ ಕಳ್ಳಸಾಗಣೆ ನಿಯಂತ್ರಣ, ತೆಂಗಿನ ದರ ಕುಸಿತಕ್ಕೆ ಕಾರಣಗಳ ಅಧ್ಯಯನ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಸಾವಯವ ಕೃಷಿಗೆ ರೈತರು […]