ಕೃಷಿ ವಿವಿಯಿಂದ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್ ಘೋಷಣೆ

ಶಿವಮೊಗ್ಗ:ಜುಲೈ 21ರಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿವಿಯ 8ನೇ ಘಟಿಕೋತ್ಸವದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುವುದು ಎಂದು ಕುಲಪತಿ ಡಾ.ಆರ್.ಸಿ.ಜಗದೀಶ್ ಮಾಹಿತಿ ನೀಡಿದರು. ”ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕ ವಿಶ್ವ ವಿದ್ಯಾನಿಲಯದಲ್ಲಿ ಜುಲೈ 21ರಂದು ಜರುಗಲಿರುವ 8ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಕುಲಪತಿ ಡಾ. ಆರ್.ಸಿ. […]