ಆಹಾರದಲ್ಲಿ ರಾಸಾಯನಿಕಗಳ ಬಳಕೆಯಿಂದ ಮಾರಕ ಕಾಯಿಲೆಗಳು : ಶೋಭಾ ಕರಂದ್ಲಾಜೆ

  ಉಡುಪಿ: ಪ್ರತಿನಿತ್ಯ ಉಪಯೋಗಿಸುವ ಆಹಾರದಲ್ಲಿ ರಾಸಾಯನಿಕ ವಸ್ತುಗಳ ಹೆಚ್ಚಿನ ಬಳಕೆಯಿಂದ ಕ್ಯಾನ್ಸರ್, ಕಿಡ್ನಿರೋಗದಂತಹ ಮಾರಕ ಕಾಯಿಲೆಗಳು ಕಂಡುಬರುತ್ತಿದ್ದು, ಸಾರ್ವಜನಿಕರು ತಮ್ಮ ಆರೋಗ್ಯದ ಕುರಿತಂತೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಉಡುಪಿ, ಜಿಲ್ಲಾ ಆಯುಷ್ ವಿಭಾಗ, ತಾಲೂಕು ಆರೋಗ್ಯಾಧಿಕಾರಿ ಕಚೇರಿ, ರೋಟರಿ ಮಿಡ್ ಟೌನ್, ರಾಷ್ಟ್ರೀಯ ಆರೋಗ್ಯ […]

ಮುಖ್ಯ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ: ಅರ್ಜಿ ಆಹ್ವಾನ

ಉಡುಪಿ, ಜೂನ್ 27: 2019-20 ನೇ ಸಾಲಿನ ಮುಖ್ಯ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ(ಸಿ.ಎಂ.ಇ.ಜಿ.ಪಿ)ಯಡಿ ಸ್ವ-ಉದ್ಯೋಗ ಸ್ಥಾಪಿಸಲು ಆಸಕ್ತಿ ಇರುವ ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ/ ಯುವತಿಯರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಯು ಕರ್ನಾಟಕ ಸರ್ಕಾರವು ಗ್ರಾಮೀಣ ಪ್ರದೇಶದಲ್ಲಿ ಸ್ವಂತ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಕರ್ನಾಟಕ ರಾಜ್ಯ ಖಾದಿ & ಗ್ರಾಮೋದ್ಯೋಗ ಮಂಡಳಿ (ಕೆ.ವಿ.ಐ.ಬಿ) ಗಳ ಮುಖಾಂತರ ಜಾರಿಗೊಳಿಸಲಾಗುತ್ತಿದೆ. ಈ ಯೋಜನೆಯಲ್ಲಿ ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ-ಯುವತಿಯರಿಗೆ ಗರಿಷ್ಠ ಯೋಜನಾ ವೆಚ್ಚ […]

ಕೃಷಿ ಮಾಡುವ ಮೊದಲು ಸಂಪೂರ್ಣ ಮಾಹಿತಿ ಅಗತ್ಯ: ತಾ.ಪಂ. ಅಧ್ಯಕ್ಷೆ

ಉಡುಪಿ:ರೈತರು ಯಾವುದೇ ಕೃಷಿ ಮಾಡಲು ಮೊದಲು ಆ ಕೃಷಿ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ತಮ್ಮ ಕೃಷಿಯಲ್ಲಿ ಅಳವಡಿಸಿಕೊಂಡಾಗ ಕೃಷಿಯಲ್ಲಿ ಉತ್ತಮ ಇಳುವರಿ ಪಡೆದು ರೈತರ ಸ್ವಯಂ ಅಭಿವೃದ್ಧಿ ಜೊತೆಗೆ ದೇಶದ ಅಭಿವೃದ್ಧಿ ಸಾಧ್ಯ ಎಂದು ತಾಲೂಕು ಪಂಚಾಯತ್ ಅಧ್ಯಕ್ಷೆ ನಳಿನಿ ಪ್ರದೀಪ್‍ರಾವ್ ತಿಳಿಸಿದ್ದಾರೆ. ಅವರು ಭಾನುವಾರ ಜಿಲ್ಲಾ ಪಂಚಾಯತ್, ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳು, ಕೃಷಿ ಸಂಘ ಪೆರಂಪಳ್ಳಿ ಹಾಗೂ ಕೆಥೋಲಿಕ್ ಸಭಾ ಪೆರಂಪಳ್ಳಿ ಘಟಕದ ಸಂಯುಕ್ತ ಆಶ್ರಯದಲ್ಲಿ ಪೆರಂಪಳ್ಳಿ ಚರ್ಚ್ ಸಭಾಭವನದಲ್ಲಿ ನಡೆದ […]