ಫೆ.17ರಂದು ರಾಜ್ಯಮಟ್ಟದ ಕಾಂಗ್ರೆಸ್ ಪದಾಧಿಕಾರಿ ಹಾಗೂ ಕಾರ್ಯಕರ್ತರ ಸಮಾವೇಶ

ಉಡುಪಿ: ಲೋಕಸಭಾ ಚುನಾವಣಾ ಸಿದ್ಧತೆಗಾಗಿ ಪಕ್ಷದ ಕಾರ್ಯಕರ್ತರನ್ನು ಇದಕ್ಕೆ ಸಜ್ಜುಗೊಳಿಸಲು ಫೆ.17ರಂದು ಮಂಗಳೂರಿನ ಅಡ್ಯಾರಿನಲ್ಲಿರುವ ಸಹ್ಯಾದ್ರಿ ಕಾಲೇಜಿನ ಮುಂಭಾಗದ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಕಾಂಗ್ರೆಸ್ (Congress) ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ ಕುಮಾರ್ ಕೊಡವೂರು ತಿಳಿಸಿದ್ದಾರೆ. ಉಡುಪಿಯಲ್ಲಿ ಪಕ್ಷದ ವತಿಯಿಂದ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಸಹಭಾಗಿತ್ವದಲ್ಲಿ ಪಕ್ಷದ ನಾಯಕರ ಹಾಗೂ ಕಾರ್ಯಕರ್ತರ ಸಹಕಾರದಿಂದ ಈ […]

ಗೋಹತ್ಯೆ ವಿರೋಧಿ ಕಾನೂನಿನ ಬಗ್ಗೆ ಸಚಿವ ವೆಂಕಟೇಶ್ ವಿವಾದಿತ ಹೇಳಿಕೆ: ಮಿತಿಯಲ್ಲಿರಲು ಸೂಚಿಸಿದ ಕಾಂಗ್ರೆಸ್ ಹೈಕಮಾಂಡ್

ಬೆಂಗಳೂರು: ರಾಜ್ಯದಲ್ಲಿನ ಗೋಹತ್ಯೆ ವಿರೋಧಿ ಕಾನೂನಿನ ಬಗ್ಗೆ ಕರ್ನಾಟಕ ಪಶುಸಂಗೋಪನೆ ಸಚಿವ ಕೆ ವೆಂಕಟೇಶ್ ಅವರ ಅಭಿಪ್ರಾಯಗಳಿಗಾಗಿ ಕಾಂಗ್ರೆಸ್ ಹೈಕಮಾಂಡ್ ಗುರುವಾರ ಅವರಿಗೆ ಛೀಮಾರಿ ಹಾಕಿದೆ ಮತ್ತು “ತಮ್ಮ ಮಿತಿಯೊಳಗೆ” ಇರುವಂತೆ ಹೇಳಿದೆ ಎಂದು ವರದಿಯಾಗಿದೆ. ಕರ್ನಾಟಕ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಅವರು ಕರ್ನಾಟಕದ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸಚಿವ ಕೆ ವೆಂಕಟೇಶ್ ಅವರಿಗೆ ತಮ್ಮ ಮಿತಿಯಲ್ಲಿರಲು ಸೂಚಿಸಿದ್ದಾರೆ. ಕೆಲ ದಿನಗಳ ಹಿಂದೆ ಕೆ.ವೆಂಕಟೇಶ್ ಅವರು ಎಮ್ಮೆ, ಹೋರಿಗಳನ್ನು ಕಡಿಯುವುದಾದರೆ ಗೋಹತ್ಯೆ ಮಾಡುವುದರಲ್ಲಿ ತಪ್ಪೇನು? […]

ಹಿರಿಯರ ಮಾತಿಗೆ ಬೆಲೆ ಕೊಟ್ಟು ತಲೆಬಾಗಬೇಕಾಯಿತು; ತಾಳ್ಮೆ ಕಾಯ್ದುಕೊಳ್ಳಿ: ಅಭಿಮಾನಿಗಳಿಗೆ ಡಿಕೆಶಿ ಕರೆ

ಕನಕಪುರ: ಮುಖ್ಯಮಂತ್ರಿ ಪಟ್ಟಕ್ಕಾಗಿ ತಮ್ಮ ಆಕಾಂಕ್ಷೆಗಳನ್ನು ಜೀವಂತವಾಗಿರಿಸಿಕೊಂಡಿರುವ ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ಬೆಂಬಲಿಗರನ್ನು ಉದ್ದೇಶಿಸಿ “ತಾಳ್ಮೆಯಿಂದ” ಇರಿ ಮತ್ತು “ನಿರಾಶೆಗೊಳ್ಳಬೇಡಿ” ಎಂದು ಕೇಳಿಕೊಂಡಿದ್ದಾರೆ. ದೊಡ್ಡ ಜವಾಬ್ದಾರಿಯಾದ ಮುಖ್ಯಮಂತ್ರಿ ಹುದ್ದೆ ಸಿಗುತ್ತದೆ ಎಂದು ನೀವೆಲ್ಲರೂ ಭಾವಿಸಿ ಪ್ರೀತಿಯ ಸುರಿಮಳೆಗೈದಿದ್ದೀರಿ, ಯಾರೂ ನಿರಾಶರಾಗುವ ಅಗತ್ಯವಿಲ್ಲ ಎಂದು ಶನಿವಾರ ತಮ್ಮ ಕ್ಷೇತ್ರ ಕನಕಪುರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಹೇಳಿದ್ದಾರೆ. ತಮ್ಮನ್ನು ಅಧಿಕಾರಕ್ಕೆ ತಂದ ಮತದಾರರಿಗೆ ಅವರು ಧನ್ಯವಾದ ಅರ್ಪಿಸಿ ಮಾತನಾಡಿ, ನನ್ನನ್ನು ಮುಖ್ಯಮಂತ್ರಿಯನ್ನಾಗಿ […]

ರಾಜ್ಯದ ಮುಂದಿನ ಮುಖ್ಯಮಂತ್ರಿ ಆಯ್ಕೆ: ದೆಹಲಿಗೆ ತೆರಳಿದ ಡಿ.ಕೆ ಶಿವಕುಮಾರ್

ಬೆಂಗಳೂರು: ಮುಖ್ಯಮಂತ್ರಿಯಾಗಬೇಕೆಂಬ ಹಂಬಲದಲ್ಲಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಇಂದು ರಾಷ್ಟ್ರ ರಾಜಧಾನಿಗೆ ತೆರಳುತ್ತಿದ್ದು, ಮುಖ್ಯಮಂತ್ರಿ ಅಭ್ಯರ್ಥಿ ಮತ್ತು ಕಾಂಗ್ರೆಸ್ ಸರ್ಕಾರ ರಚನೆ ಕುರಿತು ಕಾಂಗ್ರೆಸ್ ಪಕ್ಷದ ಕೇಂದ್ರ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, “ನಾನು ಒಬ್ಬನೇ ದೆಹಲಿಗೆ ಹೋಗುತ್ತಿದ್ದೇನೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ನನ್ನನ್ನು ಏಕಾಂಗಿಯಾಗಿ ದೆಹಲಿಗೆ ಕರೆದಿದ್ದಾರೆ. ನಾನು ಏಕಾಂಗಿಯಾಗಿ ಹೋಗುತ್ತಿದ್ದೇನೆ” ಎಂದಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅದಾಗಲೆ ತಮ್ಮ ನಿಷ್ಠಾವಂತ ಶಾಸಕರೊಂದಿಗೆ […]

ರಾಹುಲ್ ಗಾಂಧಿ, ನಿತೀಶ್ ಕುಮಾರ್ ಭೇಟಿ ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಐತಿಹಾಸಿಕ ಹೆಜ್ಜೆ: ಖರ್ಗೆ

ಹೊಸದಿಲ್ಲಿ: 2024ರ ಸಾರ್ವತ್ರಿಕ ಚುನಾವಣೆಗೆ ಮುನ್ನ ಒಗ್ಗೂಡಿದ ಪ್ರತಿಪಕ್ಷವೊಂದನ್ನು ಒಟ್ಟುಗೂಡಿಸುವ ಮತ್ತೊಂದು ಪ್ರಯತ್ನದಲ್ಲಿ, ಕಾಂಗ್ರೆಸ್, ಜನತಾ ದಳ (ಯುನೈಟೆಡ್) (ಜೆಡಿಯು) ಮತ್ತು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ದ ಉನ್ನತ ನಾಯಕರು ಇಂದು ದೆಹಲಿಯಲ್ಲಿ ಭೇಟಿಯಾದರು. ಆಡಳಿತಾರೂಢ ಬಿಜೆಪಿ ವಿರುದ್ಧ ಒಗ್ಗಟ್ಟಿನ ಹೋರಾಟ ನಡೆಸಲು ಇದೊಂದು ಐತಿಹಾಸಿಕ ಹೆಜ್ಜೆಯಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಮಾಧ್ಯಮಗಳಿಗೆ ತಿಳಿಸಿದರು. ಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಿಹಾರ ಮುಖ್ಯಮಂತ್ರಿ ಮತ್ತು ಜೆಡಿಯು […]