ಕರ್ನಾಟಕ ವಿಧಾನಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ

ಬೆಂಗಳೂರು: ಮೇ 10 ರಂದು ನಡೆಯಲಿರುವ ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು 42 ಅಭ್ಯರ್ಥಿಗಳನ್ನು ಒಳಗೊಂಡ ತನ್ನ ಎರಡನೇ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ. ಕಾಂಗ್ರೆಸ್‌ನ ಸಿಇಸಿ ಕರ್ನಾಟಕದ ವಿಧಾನಸಭೆಗೆ ಮುಂದಿನ ಚುನಾವಣೆಗೆ ಈ ಕೆಳಗಿನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪತ್ರಿಕಾ ಪ್ರಕಟಣೆ ತಿಳಿಸಿದೆ. ಮೂರು ಬಾರಿ ಶಾಸಕರಾಗಿ ಸೇವೆ ಸಲ್ಲಿಸಿರುವ ಗುರ್ಮಿಟ್ಕಲ್ ನಿಂದ ಬಿಜೆಪಿ ಮಾಜಿ ಎಂಎಲ್ ಸಿ ಬಾಬುರಾವ್ ಚಿಂಚನಸೂರ್ ಅವರನ್ನು ಪಕ್ಷ […]
ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಸಮಾಪ್ತ

ಲಾಲ್ ಚೌಕ್: ಶ್ರೀನಗರದ ಐತಿಹಾಸಿಕ ನಗರ ಕೇಂದ್ರವಾದ ಲಾಲ್ ಚೌಕ್‌ನಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾನುವಾರ (ಜನವರಿ 29) ಭಾರತ್ ಜೋಡೋ ಯಾತ್ರೆಯನ್ನು ಮುಕ್ತಾಯಗೊಳಿಸಿದರು. ಭಾನುವಾರ ಬೆಳಗ್ಗೆ ರಾಹುಲ್ ಗಾಂಧಿ ಮತ್ತು ಇತರ ಹಿರಿಯ ನಾಯಕರ ಶ್ರೀನಗರ ನಗರದ ಹೊರವಲಯದ ಪಂಥಾ ಚೌಕ್‌ನ ರಾತ್ರಿ ವಾಸ್ತವ್ಯದ ಬಳಿಕ ಭಾರತ್ ಜೋಡೋ ಯಾತ್ರೆ ಪ್ರಾರಂಭವಾಯಿತು. ಇತರ ಸ್ಥಳೀಯ ಪಕ್ಷಗಳ ಅನೇಕ ರಾಜಕಾರಣಿಗಳು ಲಾಲ್ ಚೌಕ್‌ಗೆ ರಾಹುಲ್ ಗಾಂಧಿ ಜೊತೆ ಮೆರವಣಿಗೆ ನಡೆಸಿದರು. […]
ನ.10 ರಂದು ಕಾಂಗ್ರೆಸ್ ನ ವಿವಿಧ ಸಮಿತಿಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಕಾಪು: ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ಉತ್ತರ) ಇದರ ಆಶ್ರಯದಲ್ಲಿ ವಿವಿಧ ಮುಂಚೂಣಿ ಘಟಕಗಳಾದ ಕಾಪು ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗ ಸಮಿತಿ, ಕಾಪು ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಪಂಗಡ ಸಮಿತಿ, ಕಾಪು ಬ್ಲಾಕ್ ಕಾಂಗ್ರೆಸ್ ಇಂಟಕ್ ಸಮಿತಿ, ಕಾಪು ಬ್ಲಾಕ್ ಕಾಂಗ್ರೆಸ್ ಆರ್.ಜಿ.ಪಿ.ಆರ್.ಎಸ್ ಸಮಿತಿ, ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ನ.10 ರಂದು ಸುರಭಿ ಹಾಲ್, ಕೊಟ್ನಕಟ್ಟೆಯಲ್ಲಿ ಬೆಳಿಗ್ಗೆ 10.00 ಗಂಟೆಗೆ ನಡೆಯಲಿದೆ. ಕಾಂಗ್ರೆಸ್ ಪಕ್ಷದ ಎಲ್ಲ ಹಿರಿಯ-ಕಿರಿಯ ನಾಯಕರು, ಬ್ಲಾಕ್ ಸಮಿತಿ ಪದಾಧಿಕಾರಿಗಳು, ವಿವಿಧ ಸ್ತರದ […]
40% ಕಮೀಷನ್ ಸರಕಾರದಿಂದ ಬೇಸತ್ತ ಜನತೆ ಕಾಂಗ್ರೆಸ್ ಗೆ ಅಧಿಕಾರ ನೀಡುವುದು ಖಚಿತ: ಎಐಸಿಸಿ ಕಾರ್ಯದರ್ಶಿ ರೋಝಿ ಜೋನ್

ಉಡುಪಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ 40% ಕಮೀಷನ್ ಸರಕಾರದಿಂದ ಜನರು ಬೇಸತ್ತಿದ್ದು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ನಿಚ್ಚಳ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಖಚಿತ ಎಂದು ಎಐಸಿಸಿ ಕಾರ್ಯದರ್ಶಿ, ಮೈಸೂರು ವಿಭಾಗದ ಉಸ್ತುವಾರಿ, ಕೇರಳದ ಶಾಸಕ ರೋಝಿ ಜೋನ್ ಹೇಳಿದರು. ಅವರು ಬುಧವಾರ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ರಾಜ್ಯದ ಬಿಜೆಪಿ ಸರಕಾರ ಸಂಪೂರ್ಣ ಭ್ರಷ್ಠಾಚಾರದಲ್ಲಿ ಮುಳುಗಿದ್ದು ದೇಶದಲ್ಲಿಯೇ ಇತಿಹಾಸ ಸೃಷ್ಟಿಸಿದೆ. ಜನರು ಬದಲಾವಣೆಯನ್ನು ಬಯಸಿದ್ದು, ಪ್ರಸ್ತುತ ಸರಕಾರದಿಂದ ಜನರು ಬಹಳ […]
ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ: 24 ವರ್ಷಗಳ ಬಳಿಕ ಗಾಂಧಿಯೇತರ ಅಧ್ಯಕ್ಷ

ನವದೆಹಲಿ: ಕರ್ನಾಟಕದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಬುಧವಾರ ತಮ್ಮ ಪ್ರತಿಸ್ಪರ್ಧಿ ಶಶಿ ತರೂರ್ ಅವರನ್ನು ಸೋಲಿಸಿ 24 ವರ್ಷಗಳ ಬಳಿಕ ಮೊದಲ ಗಾಂಧಿಯೇತರ ಮತ್ತು ನಾಲ್ಕು ದಶಕಗಳ ಬಳಿಕ ಮೊದಲ ಪರಿಶಿಷ್ಟ ಜಾತಿಯ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 1988 ರಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ನಿರ್ಣಯದ ಮೂಲಕ ಸೋನಿಯಾ ಗಾಂಧಿ ಅವರನ್ನು ಪಕ್ಷದ ಮುಖ್ಯಸ್ಥರಾಗಲು ಆಹ್ವಾನಿಸಿ, ಸೀತಾರಾಮ್ ಕೇಸರಿ ಅವರನ್ನು ಅನೌಪಚಾರಿಕವಾಗಿ ಪದಚ್ಯುತಗೊಳಿಸಿದ ನಂತರ 24 ವರ್ಷಗಳಲ್ಲಿ ಕಾಂಗ್ರೆಸ್ ಅನ್ನು ಮುನ್ನಡೆಸುವ ಮೊದಲ ಗಾಂಧಿಯೇತರ ವ್ಯಕ್ತಿಯಾಗಿ […]