ಅಭಿನಂದನ್ ತೋರಿದ ಸಾಹಸದಿಂದ ದೇಶದ ಗೌರವ ಹೆಚ್ಚಿದೆ: ಪೇಜಾವರ ಶ್ರೀ

ಉಡುಪಿ: ಭಾರತದ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ತೋರಿದ ಧೈರ್ಯ ಮೆಚ್ಚುವಂತದ್ದು, ಶತ್ರು (ಪಾಕಿಸ್ತಾನ) ದೇಶದಲ್ಲಿ ಆತ ವರ್ತಿಸಿದ ರೀತಿ ದೇಶದ ಗೌರವವನ್ನು ಹೆಚ್ಚಿಸಿದೆ ಎಂದು ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದರು. ಉಡುಪಿಯಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅಭಿನಂದನ್ ಜೇಬಲ್ಲಿದ್ದ ಭದ್ರತೆಗೆ ಸಂಬಂಧಿಸಿದ ಕಾಗದ ಪತ್ರ ನುಂಗಿ ದೇಶದ ಕಾಳಜಿ ತೋರಿದ್ದಾರೆ. ಅವರು ಸಾಹಸಕ್ಕೆ ಪ್ರತಿಯೊಬ್ಬ ಭಾರತೀಯರು ಸೆಲ್ಯೂಟ್ ಹೊಡೆಯಬೇಕು. ಅವರಿಗೆ ಸಾವಿರ ಸಾವಿರ ಅಭಿನಂದನೆಗಳು ಎಂದರು. ಯುದ್ಧ ಬೇಡ: ಪಾಕಿಸ್ತಾನದ ಜೊತೆ ಯುದ್ಧ ಬೇಡ, ಯುದ್ಧದಿಂದ […]