ಇಂಡಿಗೋ ಏರ್‌ಲೈನ್ಸ್ ವಿಮಾನದಲ್ಲಿ ಮದ್ಯ ಸೇವಿಸಿ ಗಲಾಟೆ: ಇಬ್ಬರ ಬಂಧನ

ಮುಂಬೈ: ದುಬೈ- ಮುಂಬೈ ಇಂಡಿಗೋ ಏರ್‌ಲೈನ್ಸ್’ನಲ್ಲಿ ಮದ್ಯ ಸೇವಿಸಿ ಗಲಾಟೆ ಮಾಡಿದ ಪ್ರಕರಣ ಸಂಬಂಧ ಇಬ್ಬರು ಪ್ರಯಾಣಿಕರನ್ನು ಪೊಲೀಸರು ಬಂಧಿಸಿದ್ದಾರೆ. ಮದ್ಯದ ಅಮಲಿನಲ್ಲಿದ್ದ ಈ ಇಬ್ಬರು ಪ್ರಯಾಣಿಕರು ವಿಮಾನ ಹಾರಾಟದಲ್ಲಿದ್ದ ವೇಳೆ ಗಲಾಟೆ ಸೃಷ್ಟಿಸಿ ಸಿಬ್ಬಂದಿ ಮತ್ತು ಸಹ ಪ್ರಯಾಣಿಕರಿಗೂ ಕಿರಿಕಿರಿಯುಂಟು ಮಾಡಿದ್ದರು. ಏರ್ ಲೈನ್ ಸಿಬ್ಬಂದಿಯ ದೂರಿನ ಮೇರೆಗೆ ಎಫ್’ಐಆರ್ ದಾಖಲಿಸಿ ಪಾಲ್ಘರ್ ಜಿಲ್ಲೆಯ ಜಾನ್ ಜಿ ಡಿಸೋಜಾ (49) ಮತ್ತು ಕೊಲ್ಲಾಪುರದ ಮಾನ್ಬೆಟ್ನ ದತ್ತಾತ್ರೇಯ ಬಾಪರ್ಡೇಕರ್ (47) ಎಂಬವರನ್ನು ಬಂಧಿಸಲಾಗಿದೆ. ಬಂಧಿತ ಇಬ್ಬರನ್ನು ನ್ಯಾಯಾಲಯಕ್ಕೆ […]