ನಿಫಾ ವೈರಸ್ ಭಯ ಬೇಡ, ಎಚ್ಚರವಿರಲಿ: ಡಾ.ವಾಸುದೇವ

ಉಡುಪಿ, ಜೂನ್ 11: ನಿಫಾ ವೈರಸ್ ಕುರಿತಂತೆ ಜಿಲ್ಲೆಯ ಜನತೆ ಯಾವುದೇ ರೀತಿ ಆತಂಕ ಪಡುವ ಅಗತ್ಯ ಇಲ್ಲ. ಜ್ವರ ಅಥವಾ ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಕಾಣಿಸಿಕೊಂಡರೂ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆದು ಮುಂಜಾಗ್ರತೆ ವಹಿಸುವಂತೆ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ವಾಸುದೇವ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು. ಅವರು ಮಂಗಳವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಕಣ್ಗಾವಲು ಸಮಿತಿಯ ಅಂತರ್ ಇಲಾಖಾ ಸಮನ್ವಯ ಸಮಿತಿ […]

ವಾಯುಭಾರ ಕುಸಿತ, ಸುರಕ್ಷತೆ ಕ್ರಮ ವಹಿಸಲು ಸೂಚನೆ: ಜಿಲ್ಲಾಧಿಕಾರಿ

ಉಡುಪಿ: ಪ್ರಸಕ್ತ ಸಾಲಿನ ಮುಂಗಾರು ಮಳೆ ಕೇರಳ ರಾಜ್ಯಕ್ಕೆ ಜೂನ್ 8 ರಂದು ಪ್ರವೇಶಿಸಿದ್ದು, ಜೂನ್ 10 ರ ಒಳಗಾಗಿ ಕರ್ನಾಟಕ ರಾಜ್ಯದ ಕರಾವಳಿ ಮತ್ತು ಮಲೆನಾಡಿನ ಕೆಲವು ಭಾಗಗಳಿಗೆ ವ್ಯಾಪಿಸಲಿದೆ. ಅರಭಿ ಸಮುದ್ರದಲ್ಲಿ ವಾಯುಭಾರ ಕುಸಿತವುಂಟಾಗುವ ಸಾಧ್ಯತೆಯಿರುವುದರಿಂದ ಮುಂದಿನ 2-3 ದಿನಗಳಲ್ಲಿ ರಾಜ್ಯದ ಕರಾವಳಿ ಒಳನಾಡು ಪ್ರದೇಶದ ಹಲವು ಭಾಗಗಳಲ್ಲಿ ಗಂಟೆಗೆ 35-45 ಕಿ.ಮೀ ವೇಗವಾಗಿ ಗಾಳಿ ಬೀಸಲಿದ್ದು, ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ […]

ಹೆಚ್1ಎನ್1: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸಾರ್ವಜನಿರಿಗೆ ಸೂಚನೆ

ಉಡುಪಿ, ಮೇ 18: ಹೆಚ್1ಎನ್1 ಕಾಯಿಲೆಯು ಹೆಚ್1ಎನ್1 ಎಂಬ ಇನ್‍ಫ್ಲುಯೆಂಜಾ ಜಾತಿಗೆ ಸೇರಿದ ವೈರಾಣುವಿನಿಂದ ಬರುವಂತಹ ಕಾಯಿಲೆಯಾಗಿದೆ. ಇದು ಹೆಚ್ಚಿನ ಜನರಲ್ಲಿ ಮಾಮೂಲಿ ಶೀತ, ಕೆಮ್ಮು ರೂಪದಲ್ಲಿ ಬಂದು ಹೋಗುತ್ತದೆ. ಈ ಕಾಯಿಲೆಯಿಂದ ಸಾವಿರದಲ್ಲಿ ಒಬ್ಬರು ಅಥವಾ ಇಬ್ಬರು ಮಾತ್ರ ಸಾವಿಗೀಡಾಗಬಹುದು. ಈ ರೋಗವಿರುವ ವ್ಯಕ್ತಿ ಕೆಮ್ಮಿದಾಗ, ಸೀನಿದಾಗ ಅವನ ಬಾಯಿ, ಮೂಗಿನಿಂದ ಲಕ್ಷಾಂತರ ರೋಗಾಣುಗಳು 5 ರಿಂದ 10 ಫೀಟ್ ತನಕ ಗಾಳಿಯಲ್ಲಿ ಹರಡುತ್ತದೆ. ಅವನ ಹತ್ತಿರ ಇರುವ ಆರೋಗ್ಯವಂತರ ಮೂಗಿಗೆ, ಬಾಯಿಗೆ ಪ್ರವೇಶಿಸಿದಾಗ ರೋಗ […]

ಚುನಾವಣಾ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಲು ಪಕ್ಷಗಳಿಗೆ ಡಿಸಿ ಸೂಚನೆ

ಉಡುಪಿ: ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆಯನ್ನು ಎಲ್ಲಾ ರಾಜಕೀಯ ಪಕ್ಷಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ. ಅವರು ಸೋಮವಾರ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ರಾಜಕೀಯ ಪಕ್ಷಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚುನಾವಣಾ ಪ್ರಚಾರದಲ್ಲಿ ಯಾವುದೇ ನಿಯಮ ಉಲ್ಲಂಘನೆಯಾಗದಂತೆ ಎಲ್ಲಾ ಪಕ್ಷಗಳು ಸ್ವಯಂ ರಕ್ಷಣೆ ವಹಿಸಬೇಕು. ಮತದಾರರ ಮೇಲೆ ಪ್ರಭಾವ ಬೀರುವ ಯಾವುದೇ ಚಟುವಟಿಕೆಗಳಿಂದ ದೂರವಿರಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಬಹಿರಂಗ ಪ್ರಚಾರವಲ್ಲದೇ, ಮಾಧ್ಯಮಗಳ ಮೂಲಕ ನಡೆಸುವ ಚುನಾವಣಾ […]

ಚುನಾವಣಾ ಸುದ್ದಿಗಳ ಮೇಲೆ ನಿಗಾ: 24*7 ಪರಿಶೀಲನೆ ಕೇಂದ್ರ ಸ್ಥಾಪನೆ

ಉಡುಪಿ: ಲೋಕಸಭಾ ಚುನಾವಣೆಯ ಪ್ರಯುಕ್ತ  ಚುನಾವಣಾ ಆಯೋಗದ ನಿರ್ದೇಶನದಂತೆ, ಜಿಲ್ಲೆಯ ಎಲ್ಲಾ ಮುದ್ರಣ, ಟಿವಿ, ರೇಡಿಯೋ ಮತ್ತು ಸಾಮಾಜಿಕ ಜಾಲ ತಾಣದಲ್ಲಿ ಪ್ರಚಾರವಾಗುವ ರಾಜಕೀಯ ಪಕ್ಷಗಳ ಜಾಹೀರಾತು, ಪ್ರಚಾರ ಕಾರ್ಯಕ್ರಮ, ಸುದ್ದಿಗಳನ್ನು ಪರಿಶೀಲಿಸಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದಿನದ 24 ಗಂಟೆ ಕಾರ್ಯ ನಿರ್ವಹಿಸುವ  ಮೀಡಿಯಾ ಮಾನಿಟರಿಂಗ್ ಮತ್ತು ಮೀಡಿಯಾ ಸರ್ಟಿಫಿಕೇಷನ್ (ಎಂಸಿಎಂಸಿ) ಕೇಂದ್ರವನ್ನು ತೆರೆಯಲಾಗಿದ್ದು, ಚುನಾವಣಾ ಸುದ್ದಿಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಎಲ್ಲಾ ಮುದ್ರಣ ಮಾಧ್ಯಮ ಮತ್ತು ಸ್ಥಳೀಯ ಚಾನೆಲ್‍ಗಳಲ್ಲಿ ಪ್ರಸಾರವಾಗುವ ಕಾರ್ಯಕ್ರಮಗಳನ್ನು ವೀಕ್ಷಿಸುವ ಜೊತೆಗೆ […]