ಆಳ್ವಾಸ್ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್‌ಷಿಪ್‌ಗೆ ವರ್ಣರಂಜಿತ ತೆರೆ

ಮೂಡಬಿದಿರೆ: ಕ್ರೀಡಾ ವಿಜೇತರಿಗೆ ಪ್ರೋತ್ಸಾಹ ಧನ ನೀಡಿ ಉತ್ತೇಜಿಸುವಂತಹ ಮಹಾತ್‌ಕಾರ್ಯ ಆಳ್ವಾಸ್ ವಿದ್ಯಾಸಂಸ್ಥೆ ಮಾಡುತ್ತಿರುವುದು ವಿಶೇಷ ಹಾಗೂ ಸ್ತುತ್ಯರ್ಹ ಎಂದು ಮಾಜಿ ಒಲಿಂಪಿಕ್ ಕ್ರೀಡಾಪಟು ಪಿ.ಟಿ.ಉಷಾ ಹೇಳಿದರು. ಬೆಂಗಳೂರಿನ ರಾಜೀವ್‌ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಆಶ್ರಯದಲ್ಲಿ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ, ಅಸೋಸಿಯೇಷನ್ ಆಫ್ ಇಂಡಿಯನ್ ಯುನಿರ್ವಸಿಟಿಯ ಸಹಭಾಗಿತ್ವದಲ್ಲಿ ಸ್ವರಾಜ್ಯ ಮೈದಾನದಲ್ಲಿ ನಡೆದ ೮೦ನೇ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್‌ಷಿಪ್‌ನ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಆಳ್ವಾಸ್ ಸಂಸ್ಥೆಯು ಸಮಯ ಪ್ರಜ್ಞೆ ಮತ್ತು ಶಿಸ್ತಿಗೆ ಹೆಚ್ಚು […]