ನೆರೆ ಹಿನ್ನೆಲೆ: ಆಳ್ವಾಸ್ ನುಡಿಸಿರಿ-ವಿರಾಸತ್ ಮುಂದೂಡಿಕೆ

ಮೂಡುಬಿದಿರೆ: ಆಳ್ವಾಸ್ ಶಿಕ್ಣಣ ಪ್ರತಿಷ್ಠಾನದ ವತಿಯಿಂದ ನವೆಂಬರ್ ತಿಂಗಳಿನಲ್ಲಿ ನಡೆಯಬೇಕಾಗಿದ್ದ ಆಳ್ವಾಸ್ ನುಡಿಸಿರಿ ಮತ್ತು ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ವಿರಾಸತನ್ನು ರಾಜ್ಯವು ನೆರೆ ಹಾವಳಿಯಿಂದ ತತ್ತರಿಸಿ ಸಂಕಷ್ಟಕ್ಕೆ ಒಳಗಾಗಿರುವುದರಿಂದ ಮುಂದೂಡಲಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ, ಕಾರ್ಯಕ್ರಮದ ರೂವಾರಿ ಡಾ.ಎಂ.ಮೋಹನ ಆಳ್ವ ಬುಧವಾರ ತಿಳಿಸಿದ್ದಾರೆ. ಪ್ರತಿ ವರ್ಷದಂತೆ ಈ‌ ಭಾರಿಯೂ ನುಡಿಸಿರಿ ನಡೆಸಲು ದಿನಾಂಕ ನಿಗದಿ ಪಡಿಸಲಾಗಿತ್ತು. ಜತೆಗೆ ಈ ವರ್ಷ ಆಳ್ವಾಸ್ ವಿರಾಸತ್ ಅನ್ನು ಜಂಟೀಯಾಗಿ ನಡೆಸಲು ನಿರ್ಧರಿಸಲಾಗಿತ್ತು. ಆದರೆ ನೆರೆ ಸಮಸ್ಯೆ ಹಿನ್ನೆಲೆಯಲ್ಲಿ […]