ಆಳ್ವಾಸ್ ಕಂಪ್ಯೂಟರ್ ಸೈನ್ಸ್ ವಿಭಾಗ:ಬಿ.ಸಿ.ಎ ಪೆಸ್ಟ್ ”ಇಗ್‌ನಿಟ್ರಾ ಉದ್ಘಾಟನೆ

ಮೂಡುಬಿದಿರೆ: ಪ್ರಸ್ತುತ ಕಾಲಘಟ್ಟದಲ್ಲಿ ತಂತ್ರಜ್ಞಾನ ಬಹಳಷ್ಟು ವೇಗವಾಗಿ ಬೆಳವಣಿಗೆ ಯಾಗುತ್ತಿದೆ. ಆದ್ದರಿಂದ ಗಣಕಯಂತ್ರ ವಿಭಾಗದ ವಿದ್ಯಾರ್ಥಿಗಳು ಇದಕ್ಕೆ ಹೊಂದಿಕೊಳ್ಳಬೇಕು ಎಂದು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ್ ಕೊಠಾರಿ ಹೇಳಿದರು. ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದಿಂದ ಆಯೋಜಿಸಲಾದ ಬಿ.ಸಿ.ಎ ಪೆಸ್ಟ್ ”ಇಗ್‌ನಿಟ್ರಾ ೨ಕೆ೨೦’ಯನ್ನು ಉದ್ಘಾಟಿಸಿ ಮಾತನಾಡಿದರು. ತಂತ್ರಜ್ಞಾನಗಳು ಹೆಚ್ಚುತ್ತಿರುವುದರಿಂದ ಉದ್ಯೋಗದ ಅವಕಾಶ ಬೇಕಾದಷ್ಟಿದೆ, ಆದರೆ ಕಾಲೇಜಿನಲ್ಲಿ ಸಿಗುವ ಅವಕಾಶಗಳನ್ನು ಸರಿಯಾಗಿ ಬಳಸಿಕೊಂಡು ತಮ್ಮ ಪ್ರತಿಭೆಗಳನ್ನು ಅನಾವರಣ ಮಾಡಬೇಕು. […]