ಅಮಾನವೀಯ: ಸರಪಳಿಯಿಂದ ವ್ಯಕ್ತಿಯ ಕೈಕಾಲು ಕಟ್ಟಿ ಬೀಗ ಜಡಿದರು!

ಕುಂದಾಪುರ: ಕೇರಳ ಮೂಲದ ವ್ಯಕ್ತಿಯೋರ್ವನ ಕಾಲಿಗೆ ಸರಪಳಿಯಿಂದ ಸುತ್ತಿ ಬೀಗ ಜಡಿದು ಗಿಡವೊಂದಕ್ಕೆ ಕಟ್ಟಿ ಹಾಕಿರುವ ಅಮಾನವೀಯ ಘಟನೆ ಬೈಂದೂರಿನ ಕಿರಿಮಂಜೇಶ್ವರ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿ ಶನಿವಾರ ಬೆಳಕಿಗೆ ಬಂದಿದೆ. ಕಿರಿಮಂಜೇಶ್ವರ ಆಸ್ಪತ್ರೆಯ ಅನತಿ ದೂರದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ವ್ಯಕ್ತಿಯೋರ್ವನನ್ನು ಸರಪಳಿಯಿಂದ ಕಾಲಿಗೆ ಬಿಗಿದು ಗಿಡವೊಂದಕ್ಕೆ ಕಟ್ಟಿರುವುದನ್ನು ನೋಡಿದ ವಾಹನ ಸವಾರರು ಬೈಂದೂರು ಠಾಣೆಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಠಾಣಾಧಿಕಾರಿ ತಿಮ್ಮೇಶ್ ಹಾಗೂ ಸಿಬ್ಬಂದಿಗಳು ಸರಪಳಿಯನ್ನು ಬಿಡಿಸಲು ಪ್ರಯತ್ನಿಸಿದರಾದರೂ ಬೀಗ ಹಾಕಿದ್ದರಿಂದ ತೆಗೆಯಲು ಸಾಧ್ಯವಾಗಿರಲಿಲ್ಲ. […]