9 ಸಾವಿರ ಉದ್ಯೋಗಿಗಳ ವಜಾಕ್ಕೆ ಮುಂದಾದ ಅಮೆಜಾನ್

ನವದೆಹಲಿ; ಎರಡನೇ ಬಾರಿಗೆ ಅಮೆಜಾನ್ ಸಂಸ್ಥೆ ಉದ್ಯೋಗಿಗಳ‌ ಕಡಿತಕ್ಕೆ ಮುಂದಾಗಿದೆ. ಇದೀಗ 9,000 ಉದ್ಯೋಗಿಗಳನ್ನು ವಜಾಗೊಳಿಸುತ್ತಿದೆ. ಈ ಕುರಿತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಂಡಿ ಜಾಸ್ಸಿ ಘೋಷಣೆ ಮಾಡಿದ್ದಾರೆ. ಆರ್ಥಿಕತೆಯ ಅನಿಶ್ಚಿತತೆಯನ್ನು ಗಮನದಲ್ಲಿಟ್ಟುಕೊಂಡು ವೆಚ್ಙಗಳನ್ನು ನಿರ್ವಹಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಈ ಹಿಂದೆ ಸಂಸ್ಥೆ ಸುಮಾರು 18,000 ಉದ್ಯೋಗಿಗಳನ್ನು ವಜಾ ಮಾಡಿತ್ತು.