ಇದು ವೈದ್ಯಕೀಯ ಪ್ರಶ್ನೆಗಳಿಗೆ ಉತ್ತರಿಸುವ ವಿಶೇಷ AI :ಗೂಗಲ್​​ನ Med-PaLM 2

ಸ್ಯಾನ್ ಫ್ರಾನ್ಸಿಸ್ಕೋ (ಅಮೆರಿಕ) : ಗೂಗಲ್​ನ AI ಸಾಫ್ಟವೇರ್ Med-PaLM 2 (PALM 2 ನ ರೂಪಾಂತರ) ಅನ್ನು ಯುಎಸ್​ ಮೂಲದ ಲಾಭರಹಿತ ಸಂಸ್ಥೆಯಾದ ಮೇಯೊ ಕ್ಲಿನಿಕ್ ಸಂಶೋಧನಾ ಆಸ್ಪತ್ರೆ ಸೇರಿದಂತೆ ಇನ್ನೂ ಕೆಲವೆಡೆ ಏಪ್ರಿಲ್​ನಿಂದ ಪರೀಕ್ಷಿಸಲಾಗುತ್ತಿದೆ ಎಂದು ವರದಿ ತಿಳಿಸಿದೆ. ವೈದ್ಯಕೀಯ ಮಾಹಿತಿ ಕುರಿತಾದ ಪ್ರಶ್ನೆಗಳಿಗೆ ನಿಖರವಾಗಿ ಉತ್ತರಿಸುವಂಥ ಕೃತಕ ಬುದ್ಧಿಮತ್ತೆ (artificial intelligence -AI) ಪ್ರೋಗ್ರಾಂ ಅನ್ನು ಗೂಗಲ್ ಪರೀಕ್ಷಿಸುತ್ತಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.ಆರೋಗ್ಯ ವಿಷಯಕ್ಕೆ ಸಂಬಂಧಿಸಿದ ವೈದ್ಯಕೀಯ ಪ್ರಶ್ನೆಗಳಿಗೆ ನಿಖರವಾಗಿ […]