ಪ್ರತ್ಯೇಕ ಮೀನುಗಾರಿಕಾ ಸಚಿವಾಲಯ; ಅಮಿತ್ ಶಾಗೆ ಬೆಂಗಳೂರಿನಲ್ಲಿ ಸನ್ಮಾನ

ಉಡುಪಿ: ಮೀನುಗಾರರ ಬಹುದಶಕಗಳ ಬೇಡಿಕೆಯಾಗಿದ್ದ ಪತ್ಯೇಕ ಮೀನುಗಾರಿಕಾ ಸಚಿವಾಲಯದ ಮನವಿಗೆ ಸ್ಪಂದಿಸಿ ಈ ಬಾರಿ ಬಜೆಟ್ನಲ್ಲಿ ಘೋಷಿಸಿದ ಕೇಂದ್ರ ಸರಕಾರದ ಪರವಾಗಿ ಭಾರತೀಯಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಶಾ ರವರನ್ನು ಅಖಿಲ ಭಾರತೀಯ ಮೀನುಗಾರರ ವೇದಿಕೆಯ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು. ಅಖಿಲ ಭಾರತ ಮೀನುಗಾರರ ವೇದಿಕೆಯ ನೇತೃತ್ವದಲ್ಲಿಕೇಂದ್ರ ಸರಕಾರಕ್ಕೆ ಮೀನುಗಾರರ ವಿವಿಧ ಬೇಡಿಕೆಗಳ ಬಗ್ಗೆ ಸಲ್ಲಿಸಿದ್ದ ಮನವಿಗೆ ಸ್ಪಂದಿಸಿದ ಪ್ರಧಾನಿ ನರೇಂದ್ರ ಮೋದಿ ಈ ಬಾರಿಯ ಬಜೆಟ್ನಲ್ಲಿ ಮೀನುಗಾರಿಕೆಗೆ ಪ್ರತ್ಯೇಕ ಸಚಿವಾಲಯವನ್ನು ಘೋಷಿಸಿ 750 ಕೋಟಿಅನುದಾನವನ್ನು […]