ಸೆ.2ರಂದು ಬೆಳಪು ವ್ಯವಸಾಯ ಸಹಕಾರಿ ಸಂಘದ ಅಮೃತ ಮಹೋತ್ಸವ ಸಂಭ್ರಮಾಚರಣೆ, ಬಡಾಗ್ರಾಮ ಉಚ್ಚಿಲದ ನವೀಕೃತ ಶಾಖೆ ಹಾಗೂ “ಸಹಕಾರಿ ಮಹಲ್” ಉದ್ಟಾಟನೆ

ಪಡುಬಿದ್ರಿ: ದೇವಿಪ್ರಸಾದ್ ಶೆಟ್ಟಿ ಸಾರಥ್ಯದಲ್ಲಿ ಮುನ್ನಡೆಯುತ್ತಿರುವ ಬೆಳಪು ವ್ಯವಸಾಯ ಸಹಕಾರಿ ಸಂಘವು ಅಮೃತ ಮಹೋತ್ಸವ ವರ್ಷಾಚರಣೆಯ ಸಂಭ್ರಮದಲ್ಲಿದ್ದು, ಸಂಘದ ಅಮೃತ ಮಹೋತ್ಸವದ ಸವಿ ನೆನಪಿಗಾಗಿ ಉಚ್ಚಿಲದಲ್ಲಿ ಸಹಕಾರಿ ಮಹಲ್ ಕಟ್ಟಡದ ಉದ್ಘಾಟನಾ ಸಮಾರಂಭವು ಸೆಪ್ಟಂಬರ್ 2ರಂದು ಬೆಳಗ್ಗೆ 9.30 ಗಂಟೆಗೆ ನಡೆಯಲಿದೆ. ಬೆಳಪು ಸಹಕಾರಿ ಸಂಘದ ಪ್ರಧಾನ ಕಚೇರಿಯ ಪಣಿಯೂರಿನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ ಮಾಹಿತಿ ನೀಡಿದರು. ಕಾರ್ಯಕ್ರಮಕ್ಕೆ ಮುನ್ನ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಿಂದ ಉಚ್ಚಿಲ ಸಹಕಾರಿ ಮಹಲ್‌ವರೆಗೆ ಸಹಕಾರಿ ಮೆರವಣಿಗೆ ನಡೆಯಲಿದೆ. […]