ಶೋಭಾ ವೈಫಲ್ಯತೆ ಸದ್ಬಳಕೆ ಮಾಡಿಕೊಳ್ಳುವಲ್ಲಿ ಕಾಂಗ್ರೆಸ್ ವಿಫಲ: ಅಮೃತ್ ಶೆಣೈ
ಉಡುಪಿ: ಕಾಂಗ್ರೆಸ್ ಹೈಕಮಾಂಡ್ ಸಂಸದೆ ಶೋಭಾ ಕರಂದ್ಲಾಜೆಯ ನಿಷ್ಕ್ರಿಯತೆ ಹಾಗೂ ಕೇಂದ್ರ ಸರ್ಕಾರದ ವೈಫಲ್ಯತೆಯನ್ನು ಸದ್ಬಳಕೆ ಮಾಡಿಕೊಂಡು ಉಡುಪಿ–ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವ ಬದಲು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ. ಈ ಬಗ್ಗೆ ಪ್ರತಿಭಟಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳ ಒತ್ತಾಯದ ಮೇರೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ ಎಂದು ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಅಮೃತ್ ಶೆಣೈ ಹೇಳಿದರು. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಡುಪಿ–ಚಿಕ್ಕಮಗಳೂರು ಲೋಕಸಭೆ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಸಂಸದೆ […]
ಉಡುಪಿ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟ: ಕೊನೆ ಕ್ಷಣದಲ್ಲಿ ಬಂಡಾಯ ಅಭ್ಯರ್ಥಿ ಅಮೃತ್ ಶೆಣೈ ನಾಮಪತ್ರ
ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಪ್ರಮೋದ್ ಮಧ್ವರಾಜ್ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಯುತ್ತಿದ್ದಂತೆ ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಎಐಸಿಸಿ ಸದಸ್ಯ ಅಮೃತ್ ಶೆಣೈ ಇಂದು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮೂಲಕ ಬಂಡಾಯ ಸಾರಿದ್ದಾರೆ. ಅಂತಿಮ ಕ್ಷಣದಲ್ಲಿ ಸ್ಪರ್ಧೆಯ ಕುರಿತು ನಿರ್ಧಾರ ತೆಗೆದುಕೊಂಡ ಅಮೃತ್ ಶೆಣೈ ಮಧ್ಯಾಹ್ನ 2.45ರ ಸುಮಾರಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರವನ್ನು ಸಲ್ಲಿಸಿದರು. ಅವರೊಂದಿಗೆ ಯಜ್ಞೇಶ್ ಆಚಾರ್ಯ, ಮನೋವೈದ್ಯ ಡಾ.ಪಿ.ವಿ. ಭಂಡಾರಿ, ಅಲೆನ್ ರೋಹನ್ ವಾಜ್, ಅನಿತಾ […]