ಬೆಂಗಳೂರಿನಲ್ಲಿ ಪಾಕಿಸ್ತಾನ ಝಿಂದಾಬಾದ್ ಘೋಷಣೆ: ಅಮೂಲ್ಯ ಪೊಲೀಸ್ ವಶಕ್ಕೆ

ಬೆಂಗಳೂರು: ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿದ್ದ ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆ ವೇಳೆ ‘ಪಾಕಿಸ್ತಾನ್ ಝಿಂದಾಬಾದ್’ ಘೋಷಣೆ ಕೂಗಿದ ಅಮೂಲ್ಯ ಎಂಬಾಕೆಯನ್ನು ಪ್ರತಿಭಟನಕಾರರು ಮತ್ತು ಸಂಘಟಕರು ಕಾರ್ಯಕ್ರಮದಿಂದ ಹೊರದಬ್ಬಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಭೆಯಲ್ಲಿ ಮಾತನಾಡಲು ಆರಂಭಿಸಿದ ಅಮೂಲ್ಯ ‘ಪಾಕಿಸ್ತಾನ್ ಝಿಂದಾಬಾದ್’ ಘೋಷಣೆ ಕೂಗಿದ್ದಾಳೆ. ಈ ವೇಳೆ ಅಸದುದ್ದೀನ್ ಒವೈಸಿ ಹಾಗೂ ಸಂಘಟಕರು ಅಮೂಲ್ಯ ಕೈಯಲ್ಲಿದ್ದ ಮೈಕ್ ಕಿತ್ತುಕೊಂಡರು. ನಂತರ ಆಕೆಯನ್ನು ಪ್ರತಿಭಟನಕಾರರು ಮತ್ತು ಸಂಘಟಕರು ಕಾರ್ಯಕ್ರಮದಿಂದ ಹೊರದಬ್ಬಿದ್ದಾರೆ.