ಕಾರ್ಕಳ‌: ಅಂಗನವಾಡಿಯಲ್ಲಿ ಕಳಪೆ ಆಹಾರ ವಿತರಣೆ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ಶುಭದರಾವ್

ಕಾರ್ಕಳ: ತಾಲೂಕಿನ ಕೆಲವು ಅಂಗನವಾಡಿ ಕೇಂದ್ರಗಳಲ್ಲಿ ತಾಯಿ ಕಾರ್ಡ್ ಮೂಲಕ ಗರ್ಭಿಣಿ ಮತ್ತು ಬಾಣಂತಿ ಸ್ತ್ರೀಯರಿಗೆ ವಿತರಣೆಯಾಗುವ ಆಹಾರ ಪದಾರ್ಥಗಳ ಗುಣಮಟ್ಟ ಕಳಪೆಯಾಗಿದ್ದು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಪುರಸಭಾ ಸದಸ್ಯ ಶುಭದರಾವ್ ಆಗ್ರಹಿಸಿದ್ದಾರೆ. ಗರ್ಭಿಣಿ ಮತ್ತು ಬಾಣಂತಿ ಸ್ತ್ರೀಯರ ಆರೋಗ್ಯದ ದೃಷ್ಟಿಯಿಂದ ಸರಕಾರವು ಅಕ್ಕಿ, ಬೇಳೆ, ಸಾಂಬಾರು ಹುಡಿ ಮತ್ತು ‌ಮೊಟ್ಟೆ ಮೊದಲಾದ ಪೋಷಕಾಂಶದ ಆಹಾರ ಪದಾರ್ಥಗಳನ್ನು ವಿತರಿಸುತ್ತಿದ್ದು ಈ ಬಾರಿ ವಿತರಣೆಯಾದ ಸಾಂಬಾರು ಹುಡಿಯ ಗುಣಮಟ್ಟ ತೀರ ಕಳಪೆಯಾಗಿದ್ದು ಉಂಡೆಗಳಾಗಿ ಪರಿವರ್ತನೆಯಾಗಿ ಬಳಕೆಗೆ […]

ರಾಜ್ಯಾದ್ಯಂತದ ಅಂಗನವಾಡಿಗಳಲ್ಲಿ ಮೊದಲನೆ ಹಂತದ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ: ಶಿಕ್ಷಣ ಸಚಿವ

ಬೆಂಗಳೂರು: ಶಾಲಾ ಶಿಕ್ಷಣದಲ್ಲಿ ಎನ್‌ಇಪಿ ಜಾರಿಗೊಳಿಸುವ ಕುರಿತು ರಾಜ್ಯ ಸರ್ಕಾರವು ಕೇಂದ್ರ ಶಿಕ್ಷಣ ಸಚಿವಾಲಯಕ್ಕೆ 26 ಸ್ಥಾನಮಾನ ಪತ್ರಗಳನ್ನು ಸಲ್ಲಿಸಿದೆ. ವಸತಿ ಸಚಿವ ವಿ ಸೋಮಣ್ಣ ತಮ್ಮ ಕ್ಷೇತ್ರದಲ್ಲಿ ಭಾನುವಾರ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆಯಲ್ಲಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರು ಈ ವಿಷಯ ಪ್ರಕಟಿಸಿದ್ದಾರೆ. “ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಹಂತ ಹಂತವಾಗಿ ಅನುಷ್ಠಾನಗೊಳಿಸಲಿದ್ದು, ಮೊದಲ ಹಂತದಲ್ಲಿ ರಾಜ್ಯಾದ್ಯಂತದ ಅಂಗನವಾಡಿಗಳಲ್ಲಿ ಅನುಷ್ಠಾನಗೊಳಿಸಲಾಗುವುದು. ಮುಂದಿನ ಹಂತದಲ್ಲಿ ಎನ್‌ಇಪಿ ಅನ್ನು ಪ್ರಾಥಮಿಕ […]

ಅಂಗನವಾಡಿ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆಗೆ ಮನವಿ

ಉಡುಪಿ, ಜೂನ್ 1: ಕಾರ್ಕಳ ತಾಲೂಕು ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯ ನೀರೆ, ಕುಕ್ಕುಜೆ, ದೋಣಿಪಲ್ಕೆ, ಕೋಡಂಗೈ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಹಾಗೂ ನಿಟ್ಟೆ ಪರಪ್ಪಾಡಿ, ಬೆಳ್ಮಣ್ ಪುನಾರ್, ರಾಗಿಹಕ್ಲು, ಪತ್ತೊಂಜಿಕಟ್ಟೆ, ಬಿ.ಇ.ಎಂ ಶಾಲೆ ಅಂಗನವಾಡಿ ಕೇಂದ್ರದ ಸಹಾಯಕಿಯರನ್ನು ಗುರುತಿಸಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಈ ಆಯ್ಕೆ ಪಟ್ಟಿಯ ಬಗ್ಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಜೂನ್ 6 ರ ಒಳಗೆ ಶಿಶು ಅಭಿವೃದ್ಧಿ ಯೋಜನಾ ಕಚೇರಿ,  ತಾಲೂಕು ಪಂಚಾಯತ್ ಕಚೇರಿ, ಕಾರ್ಕಳ ಇಲ್ಲಿಗೆ ಲಿಖಿತವಾಗಿ […]

ಉಡುಪಿ,ಬ್ರಹ್ಮಾವರ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆಗೆ ಮನವಿ

ಉಡುಪಿ, ಮೇ 31: ಉಡುಪಿ, ಬ್ರಹ್ಮಾವರ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ಗ್ರಾಮ ಪಂಚಾಯತ್, ನಗರಸಭೆ ಹಾಗೂ ಪುರಸಭೆ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಡುಪಿ ಹಾಗೂ ಬ್ರಹ್ಮಾವರ ಕಚೇರಿಯ ನೋಟೀಸ್ ಬೋರ್ಡಿನಲ್ಲಿ ಹಾಕಲಾಗಿರುತ್ತದೆ. ಈ ಆಯ್ಕೆ ಪಟ್ಟಿಯ ಬಗ್ಗೆ ಆಕ್ಷೇಪಣೆ ಇದ್ದಲ್ಲಿ ಜೂನ್ 6 ರ ಒಳಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಇವರಿಗೆ ಮುದ್ದಾಂ ಆಗಿ ಅಥವಾ ಅವರ ಕಚೇರಿಗೆ ಸಲ್ಲಿಸುವಂತೆ ಉಡುಪಿ ಹಾಗೂ ಬ್ರಹ್ಮಾವರ ಶಿಶು […]