ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ನಾಲ್ಕು ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ- 2 ಹುದ್ದೆ ಮತ್ತು ಅಂಗನವಾಡಿ ಸಹಾಯಕಿಯರ- 35 ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 35 ವರ್ಷದೊಳಗಿನ ಎಸ್.ಎಸ್.ಎಲ್.ಸಿ ತೇರ್ಗಡೆಯಾದ ಸ್ಥಳೀಯ ಅಭ್ಯರ್ಥಿಗಳು ಕಾರ್ಯಕರ್ತೆ ಹುದ್ದೆಗೆ ಹಾಗೂ ಕನಿಷ್ಠ 4 ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9 ನೇ ತರಗತಿ ವಿದ್ಯಾರ್ಹತೆ ಹೊಂದಿದ ಸ್ಥಳೀಯ ಅಭ್ಯರ್ಥಿಗಳು […]