ಕುಂದಾಪುರ: ಅಂಗನವಾಡಿ ಕಾರ್ಯಕರ್ತೆ- ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಣೆ

ಕುಂದಾಪುರ: ಕುಂದಾಪುರ ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಚೇರಿಯ ನೋಟಿಸ್ ಬೋರ್ಡಿನಲ್ಲಿ ಹಾಕಲಾಗಿದ್ದು,ಆಕ್ಷೇಪಣೆ ಇದ್ದಲ್ಲಿ ಜೂನ್ 9 ರ ಸಂಜೆ 5:30 ರೊಳಗಾಗಿ ಶಿಶು ಅಭಿವೃದ್ದಿ ಯೋಜನೆ ಕುಂದಾಪುರ ಇವರಿಗೆ ಖುದ್ದಾಗಿ ಸಲ್ಲಿಸಲು ಪ್ರಕಟಣೆ ತಿಳಿಸಿದೆ.
ಅಂಗನವಾಡಿ ಕಾರ್ಯಕರ್ತೆಯರ ನೋವಿಗೆ ಸ್ಪಂದಿಸದ ಬೊಮ್ಮಾಯಿಯವರ ಕುರುಡು ಸರ್ಕಾರ: ವೆರೋನಿಕಾ ಕರ್ನೆಲಿಯೋ

ಉಡುಪಿ: ಅಂಗವಾಡಿ ಕಾರ್ಯಕರ್ತೆಯರ ಪ್ರತಿಭಟನೆಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡದೆ ಕಣ್ಣಿದ್ದು ಕುರುಡಾಗಿರುವ ಬಸವರಾಜ ಬೊಮ್ಮಾಯಿ ಅವರು ಮಹಿಳೆಯರಿಗೆ ನೀಡುವ ಗೌರವ ಏನು ಎನ್ನುವುದಕ್ಕೆ ಪ್ರತ್ಯಕ್ಷ ಸಾಕ್ಷಿ ಎಂಬಂತಿದೆ ಎಂದು ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೊ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿ ತಮ್ಮ ನ್ಯಾಯಯುತ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಕುಳಿತು ಚಳಿಯನ್ನೂ ಲೆಕ್ಕಿಸದೆ ಅಹೋರಾತ್ರಿ ಧರಣಿ ನಡೆಸುತ್ತಿದ್ದು ಅವರ ಬೇಡಿಕೆಗಳನ್ನು ಪರಿಗಣಿಸುವ ಕನಿಷ್ಠ ಪ್ರಯತ್ನ ಕೂಡ […]