ಗುಡ್ಡೆಅಂಗಡಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಉಪಾಧ್ಯಕ್ಷ ಅನಿಲ್ ಕುಮಾರ್ ನಿಧನ

ಉಡುಪಿ: ಅಲೆವೂರು ಗುಡ್ಡೆಅಂಗಡಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಉಪಾಧ್ಯಕ್ಷ ಅನಿಲ್ ಕುಮಾರ್ (56) ಭಾನುವಾರ ಹೃದಯಾಘಾತದಿಂದ ನಿಧನರಾದರು. ತುಳುನಾಡ ದೈವಾರಾಧಕರ ಸಹಕಾರಿ ಒಕ್ಕೂಟ , ಉಡುಪಿ ಜಿಲ್ಲೆ ಇದರ ಸ್ಥಾಪಕ ಅಧ್ಯಕ್ಷರಾಗಿ ,ಅಲೆವೂರು ಎಜ್ಯುಕೇಶನ್ ಸೊಸೈಟಿಯ ಸಲಹೆಗಾರರಾಗಿ, ಬಿಲ್ಲವ ಒಕ್ಕೂಟ ಹಾಗೂ ಹಲವಾರು ಸಂಘ ಸಂಸ್ಥೆಗಳಲ್ಲಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ  ನಿರೂಪಕರಾಗಿ, ಕಲಾವಿದರಾಗಿ ಹಲವು ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಅವರು ಪತ್ನಿ, ಓರ್ವ ಪುತ್ರನನ್ನು ಅಗಲಿದ್ದಾರೆ.