ಅನ್ನಭಾಗ್ಯ ಯೋಜನೆ: 24 ಜಿಲ್ಲೆಗಳಲ್ಲಿ 78 ಲಕ್ಷ ಫಲಾನುಭವಿಗಳು; ಒಟ್ಟು 456 ಕೋಟಿ ರೂ. ಜಮಾ
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಎರಡನೇ ಗ್ಯಾರೆಂಟಿಯಾದ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಫಲಾನುಭವಿಗಳಿಗೆ ಐದು ಕೆಜಿ ಅಕ್ಕಿ ಬದಲಿಗೆ ನಗದು ವರ್ಗಾವಣೆ ಮಾಡುವ ಕಾರ್ಯಕ್ರಮಕ್ಕೆ ಈಗಾಗಲೆ ಚಾಲನೆ ದೊರೆತಿದೆ. ಜು.10 ರಂದು ಕಾರ್ಯಕ್ರಮಕ್ಕೆ ಚಾಲನೆ ದೊರೆತ ನಂತರ ಇದುವರೆಗೆ ರಾಜ್ಯ ಸರ್ಕಾರ 24 ಜಿಲ್ಲೆಯ 78.4 ಲಕ್ಷ ಫಲಾನುಭವಿಗಳಿಗೆ 456.73 ಕೋಟಿ ರೂ. ಜಮಾ ಮಾಡಿದೆ. ಇನ್ನುಳಿದ ಏಳು ಜಿಲ್ಲೆಗಳಲ್ಲಿ ಫಲಾನುಭವಿಗಳಿಗೆ ನೇರ ಲಾಭ ವರ್ಗಾವಣೆ (DBT) ಪ್ರಕ್ರಿಯೆಯಲ್ಲಿದೆ. ಆಹಾರ ಮತ್ತು ನಾಗರಿಕ […]
ಅನ್ನಭಾಗ್ಯ ಯೋಜನೆಗೆ ಅಕ್ಕಿ ನಿರಾಕರಣೆ ಕೇಂದ್ರ ಸರ್ಕಾರದ ಕೊಳಕು ರಾಜಕೀಯಕ್ಕೆ ಸಾಕ್ಷಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಅನ್ನಭಾಗ್ಯ ಯೋಜನೆ ಘೋಷಣೆ ಆದ ತಕ್ಷಣ ರಾಜ್ಯಕ್ಕೆ ಅಕ್ಕಿ ಕೊಡುವುದನ್ನು ನಿಲ್ಲಿಸುವ ಮಾಡುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಬಡವರ ವಿರೋಧಿಯಾದ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ. ಅವರೇನು ಪುಕ್ಕಟ್ಟೆ ಕೊಡುತ್ತಿರಲಿಲ್ಲ, ಕೆಜಿಗೆ 34 ರೂ ನಮ್ಮಿಂದ ತಗೊಳ್ಳುತ್ತಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ವಿಧಾನಸೌಧದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅನ್ನ ಭಾಗ್ಯ ಯೋಜನೆಯ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ […]
ಕೇಂದ್ರ ಸರಕಾರದ 5 ಕೆ.ಜಿ ಜೊತೆಗೆ ಗ್ಯಾರಂಟಿಯ 10 ಕೆ.ಜಿ. ಅಕ್ಕಿ ವಿತರಿಸಿ ಕಾಂಗ್ರೆಸ್ ಪೌರುಷ ತೋರಿಸಲಿ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ಚುನಾವಣೆಯ ಸಂದರ್ಭದಲ್ಲಿ ಪೂರ್ವಾಪರ ಆಲೋಚಿಸದೆ ಬೇಕಾಬಿಟ್ಟಿಯಾಗಿ 5 ಉಚಿತ ಗ್ಯಾರಂಟಿಗಳನ್ನು ಘೋಷಿಸಿ, ತಮ್ಮ ವಾಗ್ದಾನದಂತೆ 24 ಗಂಟೆಗಳಲ್ಲಿ ಜಾರಿಗೊಳಿಸದೆ ರಾಜ್ಯದ ಜನತೆಯನ್ನು ಯಾಮಾರಿಸಿರುವ ಕಾಂಗ್ರೆಸ್ ಇದೀಗ ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನದ ಬದಲು ಕೇಂದ್ರ ಸರಕಾರ ರಾಜ್ಯಕ್ಕೆ ನೀಡುತ್ತಿರುವ ಉಚಿತ 5 ಕೆ.ಜಿ. ಅಕ್ಕಿಯನ್ನು ಹೊರತುಪಡಿಸಿ, ತಮ್ಮ ಗ್ಯಾರಂಟಿಯ 10 ಕೆ.ಜಿ. ಅಕ್ಕಿಯನ್ನು ಖರೀದಿಸಿ ಪ್ರತ್ಯೇಕವಾಗಿ ವಿತರಿಸಿ ಪೌರುಷ ತೋರಿಸಲಿ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ರಾಷ್ಟ್ರೀಯ […]
ಮಂಗಳೂರು: ಅನ್ನಭಾಗ್ಯಕ್ಕೆ ಅಕ್ಕಿ ನಿರಾಕರಣೆ ಆರೋಪಿಸಿ ಮಂಗಳೂರಿನಲ್ಲಿ ಅನ್ನದ ತಟ್ಟೆ ಹಿಡಿದು ಕಾಂಗ್ರೆಸ್ ಪ್ರತಿಭಟನೆ
ಮಂಗಳೂರು: ಮಂಗಳವಾರ ಮಂಗಳೂರಿನ ಮಿನಿ ವಿಧಾನಸೌಧದ ಎದುರು ‘10 ಕೆಜಿ ಉಚಿತ ಅಕ್ಕಿ’ ಅನ್ನಭಾಗ್ಯ ಯೋಜನೆಗಾಗಿ ಕರ್ನಾಟಕಕ್ಕೆ ಅಕ್ಕಿ ನಿರಾಕರಿಸುತ್ತಿರುವ ಕೇಂದ್ರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಅಕ್ಕಿ ತಟ್ಟೆ ಹಿಡಿದು ಪ್ರತಿಭಟನೆ ನಡೆಸಿದರು. ಭಾರತೀಯ ಆಹಾರ ನಿಗಮವು (ಎಫ್‌ಸಿಐ) ಬಿಪಿಎಲ್ ಕಾರ್ಡ್‌ದಾರರಿಗೆ 10 ಕೆಜಿ ಉಚಿತ ಅಕ್ಕಿಯನ್ನು ಪೂರೈಸುವ ತನ್ನ ಪ್ರಮುಖ ಕಾರ್ಯಕ್ರಮಕ್ಕೆ ಹೆಚ್ಚುವರಿ ಅಕ್ಕಿಗಾಗಿ ರಾಜ್ಯದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದೆ. ಆದರೆ, ಬಳಿಕ ಕೇಂದ್ರದ ಒತ್ತಡಕ್ಕೆ ಮಣಿದು ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿದೆ ಎಂದು ಪ್ರತಿಭಟನಾಕಾರರು […]
ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡಲು ಒಪ್ಪದ ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಉಡುಪಿ: ಕಾಂಗ್ರೆಸ್ ಪಕ್ಷದ ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡುವ ನಿರ್ಧಾರದಿಂದ ಹಿಂದೆ ಸರಿದು ಬಡವರ ಅನ್ನ ಕಿತ್ತುಕೊಳ್ಳಲು ಹೊರಟಿರುವ ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಉಡುಪಿ ಬ್ರಹ್ಮಗಿರಿ ಸರ್ಕಲ್ ನಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ನೂರಾರು ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಭವನದಿಂದ ಮೆರವಣಿಗೆಯಲ್ಲಿ ಹೊರಟು ಬ್ರಹ್ಮಗಿರಿ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದರು. ಕೇಂದ್ರ ಸರಕಾರದ ವಿರುದ್ಧ ಧಿಕ್ಕಾರ ಕೂಗಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕೇಂದ್ರ […]