ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ

ಪೆರ್ಡೂರು: ಶ್ರೀ ಕ್ಷೇತ್ರ ಪೆರ್ಡೂರು ಮಹತೋಭಾರ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ರಥೋತ್ಸವವು ಕೊರಂಗ್ರರಪಾಡಿ ಶ್ರೀ ಕೆ. ಜಿ. ವಿಠ್ಠಲ್ ತಂತ್ರಿಯವರ ನೇತೃತ್ವದಲ್ಲಿ ವಿಜೃಂಭಣೆಯಿಂದ ಸಂಪನ್ನಗೊಂಡಿತು. ಉತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ರಥೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು, ಜಾತ್ರಾ ಮಹೋತ್ಸವದ ವೈಭವವನ್ನು ಕಣ್ತುಂಬಿಕೊಂಡರು.