ಜಿಲ್ಲಾ ಸರಕಾರಿ ನೌಕರರ ವಾರ್ಷಿಕ ಸಭೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ
ಉಡುಪಿ: ರಾಜ್ಯದ ಇತರ ಜಿಲ್ಲೆಗಳಿಗೆ ಹೋಲಿಸಿದರೆ ಉಡುಪಿ ಜಿಲ್ಲೆಯ ಸರಕಾರಿ ನೌಕರರು ಸರಕಾರಿ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನವಾಗುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದು ಸಾರ್ವಜನಿಕರಿಗೆ ಉತ್ತಮ ರೀತಿಯಲ್ಲಿ ಸೇವೆ ನೀಡುತ್ತಿದ್ದಾರೆ ಎಂದು ಶಾಸಕ ರಘುಪತಿ ಭಟ್ ಹೇಳಿದರು. ಅವರು ಶುಕ್ರವಾರದಂದು ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಸರಕಾರಿ ನೌಕರರ ಸಂಘದ 2022 ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಯಲ್ಲಿ 7500 ಕ್ಕೂ ಅಧಿಕ ಸರಕಾರಿ […]