ಸೇನಾ ಟ್ರಕ್ ಮೇಲೆ ಉಗ್ರರ ದಾಳಿಯಲ್ಲಿ ಐವರು ಯೋಧರು ಹುತಾತ್ಮ: ಭಯೋತ್ಪಾದಕರ ವಿರುದ್ದ ಕಾರ್ಯಾಚರಣೆಗೆ ಎನ್.ಐ.ಎ ಸಾಥ್
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಗುರುವಾರ ಸೇನಾ ಟ್ರಕ್ ಮೇಲೆ ಉಗ್ರರು ದಾಳಿ ನಡೆಸಿದ ನಂತರ ಬೃಹತ್ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಸೇನಾ ವಾಹನದ ಮೇಲೆ ನಡೆದ ಭಯೋತ್ಪಾದಕರ ದಾಳಿಯಲ್ಲಿ ಐವರು ಯೋಧರು ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಜೀವನ್ಮರಣ ಸ್ಥಿತಿಯಲ್ಲಿ ಹೋರಾಡುತ್ತಿದ್ದಾರೆ. ಲ್ಯಾನ್ಸ್ ನಾಯಕ್ ಕುಲ್ವಂತ್ ಸಿಂಗ್, ಸಿಪಾಯಿ ಸೇವಕ್ ಸಿಂಗ್, ಹವಾಲ್ದಾರ್ ಮನದೀಪ್ ಸಿಂಗ್, ಲ್ಯಾನ್ಸ್ ನಾಯಕ್ ದೇಬಶಿಶ್ ಬಸ್ವಾಲ್ ಹಾಗೂ ಸಿಪಾಯಿ ಹರಕೃಷ್ಣ ಸಿಂಗ್ ಮೃತಪಟ್ಟ ಯೋಧರು. ಯೋಧರು ಸಾಗುತ್ತಿದ್ದ ಟ್ರಕ್‌ಗೆ […]