ಭಾರತವನ್ನು ಕ್ರೀಡಾ ಸಾಫ್ಟ್ ಪವರ್ ಆಗಿಸುವುದು ಕೇಂದ್ರದ ಉದ್ದೇಶ: ಅನುರಾಗ್ ಸಿಂಗ್ ಠಾಕೂರ್

ಉಡುಪಿ: ಶನಿವಾರದಂದು ಅಜ್ಜರಕಾಡಿನಲ್ಲಿ ನೂತನವಾಗಿ ನಿರ್ಮಾಣವಾಗಿರುವ ಕ್ರೀಡಾ ವಿಜ್ಞಾನ ಕೇಂದ್ರವನ್ನು ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಾರತವನ್ನು ಕ್ರೀಡಾ ಸಾಫ್ಟ್ ಪವರ್ ಆಗಿ ಪರಿವರ್ತಿಸಲು ಸರ್ಕಾರ ಪ್ರಯತ್ನ ನಡೆಸುತ್ತಿದೆ ಎಂದರು. ಕ್ರೀಡೆಯಾಗಿ ಕಬಡ್ಡಿಯು ಫುಟ್ಬಾಲ್ ಮತ್ತು ಕ್ರಿಕೆಟ್‌ನಂತೆ ವೃತ್ತಿಪರ ಪ್ರಾಮುಖ್ಯತೆಯನ್ನು ಪಡೆಯುತ್ತಿದೆ. ಅಟಲ್ ಜೀ ಸ್ಮರಣಾರ್ಥ ಉಡುಪಿಯ ಎಂಜಿಎಂ ಮೈದಾನದಲ್ಲಿ ಇಂದು ಆರಂಭವಾದ ಅಟಲ್ ಟ್ರೋಫಿಯು ಕ್ರೀಡೆಯನ್ನು ಮತ್ತಷ್ಟು ಉತ್ತೇಜಿಸಲು ಮತ್ತು ಭಾರತದಾದ್ಯಂತ […]

ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳನ್ನು ತಯಾರಿಸುವ ಕ್ರೀಡಾ ವಿಜ್ಞಾನ ಕೇಂದ್ರದ ಉದ್ಘಾಟನೆ: ಕೆ. ರಘುಪತಿ ಭಟ್

ಉಡುಪಿ: ಜಿಲ್ಲೆಯಲ್ಲಿನ ಕ್ರೀಡಾಪಟುಗಳಿಗೆ ಉತ್ತೇಜಿಸುವುದರೊಂದಿಗೆ ಅವರುಗಳು ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿ, ಉತ್ತಮ ಪ್ರದರ್ಶನ ನೀಡುವುದರೊಂದಿಗೆ ಸ್ಪರ್ಧೆಗಳಲ್ಲಿ ವಿಜೇತರಾಗಿ ಪ್ರಶಸ್ತಿ ಹಾಗೂ ಬಹುಮಾನ ಪಡೆಯುವಂತೆ ಅನುಕೂಲ ಮಾಡುವ ಉದ್ದೇಶದಿಂದ ಉಡುಪಿ ನಗರದಲ್ಲಿ ಕ್ರೀಡಾ ವಿಜ್ಞಾನ ಕೇಂದ್ರವನ್ನು ಸ್ಥಾಪಿಸಲಾಗುತ್ತಿದ್ದು, ಕ್ರೀಡಾಪಟುಗಳು ದೇಹ ಸದೃಢತೆ ಆಧಾರಿತ ಕ್ರೀಡೆಯಲ್ಲಿ ಭಾಗವಹಿಸುವಿಕೆ, ಕ್ರೀಡಾ ಸಂದರ್ಭದಲ್ಲಿ ಆಗುವ ಅವಘಡಗಳ ಚಿಕಿತ್ಸೆಗೆ ನೆರವಾಗುವ ಕ್ರೀಡಾ ವಿಜ್ಞಾನ ಕೇಂದ್ರವನ್ನು 2 ಕೋಟಿ ರೂ. ವೆಚ್ಚದಲ್ಲಿ ಉಡುಪಿಯ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಇದೇ 24 ರಂದು […]