ಕೇಂದ್ರ ಸಚಿವರಿಂದ ಶ್ರೀಕೃಷ್ಣಮಠ ಭೇಟಿ
ಉಡುಪಿ: ಭಾರತ ಸರಕಾರದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಹಾಗೂ ಯುವ ವ್ಯವಹಾರಗಳು ಮತ್ತು ಕ್ರೀಡಾ ಇಲಾಖೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಶ್ರೀಕೃಷ್ಣಮಠಕ್ಕೆ ಆಗಮಿಸಿ ದೇವರ ದರ್ಶನ ಮಾಡಿ ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು. ಈ ಸಂದರ್ಭದಲ್ಲಿ, ಕರ್ನಾಟಕ ರಾಜ್ಯ ರೇಷ್ಮೆ ಹಾಗೂ ಕ್ರೀಡಾ ಮತ್ತು ಯುವ ಸಬಲೀಕರಣ ಸಚಿವ ಡಾ.ನಾರಾಯಣ ಗೌಡ, ಶಾಸಕ ಕೆ.ರಘುಪತಿ ಭಟ್, ಉಡುಪಿ ಜಿಲ್ಲಾಧಿಕಾರಿ ಕೂರ್ಮಾ್ರಾವ್ ಪರ್ಯಾಯ ಮಠದ ದಿವಾನ ವರದರಾಜ ಭಟ್, ಪರ್ಯಾಯ […]
ಡಿ.24ರಂದು ಅಟಲ್ ಉತ್ಸವ ರಾಷ್ಟ್ರಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಕೂಟ
ಉಡುಪಿ: ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 98ನೇ ಜನ್ಮದಿನಾಚರಣೆಯ ಅಂಗವಾಗಿ ಬಿಜೆಪಿ ಉಡುಪಿ ನಗರ ಹಾಗೂ ಗ್ರಾಮಾಂತರ ವತಿಯಿಂದ ಡಿ. 24ರಂದು ಸಂಜೆ 5ಗಂಟೆಗೆ “ಅಟಲ್ ಉತ್ಸವ” ರಾಷ್ಟ್ರಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಕೂಟ ಹಾಗೂ ಡಿ. 25ರಂದು ಸಂಜೆ 4ಗಂಟೆಗೆ ಬೂತ್ ಸಂಗಮ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಎರಡು ಕಾರ್ಯಕ್ರಮಗಳೂ ಉಡುಪಿ ಎಂಜಿಎಂ ಮೈದಾನದಲ್ಲಿ ನಡೆಯಲಿದೆ ಎಂದು ಶಾಸಕ ರಘುಪತಿ ಭಟ್ ತಿಳಿಸಿದರು. ಮಣಿಪಾಲದ ಕಂಟ್ರಿ ಇನ್ ಹೋಟೆಲ್ ನಲ್ಲಿ ಮಂಗಳವಾರ […]
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಮೂರು ತಿಂಗಳು ವಿಸ್ತರಣೆ
ನವದೆಹಲಿ: ಕೇಂದ್ರ ಸಚಿವ ಸಂಪುಟವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಈ ವರ್ಷದ ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗೆ ಇನ್ನೂ ಮೂರು ತಿಂಗಳವರೆಗೆ ವಿಸ್ತರಿಸಿದೆ. ಮುಂದಿನ ಮೂರು ತಿಂಗಳ ಅವಧಿಯಲ್ಲಿ 44 ಸಾವಿರದ 762 ಕೋಟಿ ರೂಪಾಯಿ ಯೋಜನೆಗಾಗಿ ವೆಚ್ಚವಾಗಲಿದೆ. ಈ ಯೋಜನೆಯಡಿ ಈವರೆಗೆ ಸುಮಾರು ಮೂರು ಲಕ್ಷದ 45 ಸಾವಿರ ಕೋಟಿ ರೂಪಾಯಿಗಳನ್ನು ಸರ್ಕಾರ ಖರ್ಚು ಮಾಡಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಮಾಹಿತಿ ನೀಡಿದ್ದಾರೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು […]