ಹಿಂದುಳಿದ ವರ್ಗಗಳ ಕಾನೂನು ಪದವೀಧರಿಗೆ ತರಬೇತಿ: ಅರ್ಜಿ ಆಹ್ವಾನ

ಉಡುಪಿ, ಜುಲೈ 5: 2019-20ನೇ ಸಾಲಿಗೆ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ವಕೀಲಿ ವೃತ್ತಿಯಲ್ಲಿ ತರಬೇತಿ ನೀಡಿ ಶಿಷ್ಯವೇತನ ಮಂಜೂರು ಮಾಡಲು ಅರ್ಹ ಮತ್ತು ಆಸಕ್ತ ಕಾನೂನು ಪದವೀಧರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಗಧಿತ ಅರ್ಜಿ ನಮೂನೆಗಳನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮಣಿಪಾಲ, ಉಡುಪಿ ಕಛೇರಿಯಿಂದ ಕಛೇರಿ ಕೆಲಸದ ಸಮಯದಲ್ಲಿ ಪಡೆದುಕೊಳ್ಳಬಹುದು. ಅರ್ಜಿ ಸಲ್ಲಿಸುವ ಕಾನೂನು ಪದವೀಧರರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಮತ್ತು 3ಬಿ ಗಳಿಗೆ ಸೇರಿದವರಾಗಿರಬೇಕು. ಪ್ರವರ್ಗ-1 ಕ್ಕೆ 3,50,000 ರೂ. (ರೂ. […]